ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ | ಭಾರತೀಯರಾಗಿ ಒಗ್ಗೂಡೋಣ: ಯದುವೀರ್

Published : 29 ಸೆಪ್ಟೆಂಬರ್ 2024, 7:30 IST
Last Updated : 29 ಸೆಪ್ಟೆಂಬರ್ 2024, 7:30 IST
ಫಾಲೋ ಮಾಡಿ
Comments

ಉಡುಪಿ: ಪ್ರತಿಯೊಬ್ಬ ಭಾರತೀಯ ಕನ್ನಡಿಗನಲ್ಲ, ಆದರೆ ಪ್ರತಿಯೊಬ್ಬ ಕನ್ನಡಿಗ ಭಾರತೀಯ. ಆದ್ದರಿಂದ ನಾವು ಭಾರತೀಯರಾಗಿ ಒಗ್ಗೂಡೋಣ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿಯ ಕುಂಜಿಬೆಟ್ಟುವಿನ ಶಾರದಾ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕರಾವಳಿಯ ಸಾಹಿತಿಗಳು, ಕಲಾವಿದರು, ಲೇಖಕರು, ಕವಿಗಳು, ಚುಟುಕು ಬರಹಗಾರರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ಸಮ್ಮೇಳನಗಳು ಭಾರತೀಯರ ಏಕತೆಗಾಗಿ ಕೆಲಸ ಮಾಡಬೇಕು ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ. ಶಾಸಕರಾದ ಗುರುರಾಜ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಕಿಶೋರ್ ಕುಮಾರ್ ಕುಂದಾಪುರ, ವಿಜಯ್ ಕುಮಾರ್ ಕೊಡವೂರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT