ಸೋಮವಾರ, ಜುಲೈ 26, 2021
26 °C

ಉಚಿತ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಉಡುಪಿಯಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ (ಹೆಜ್ಜೆಗಾರಿಕೆ) ಉಚಿತ ತರಬೇತಿ ಆರಂಭಿಸಲಾಗುತ್ತಿದ್ದು, ಜುಲೈ 20ರಂದು ತರಗತಿಗಳು ಆರಂಭವಾಗಲಿವೆ.

4 ವರ್ಷಗಳಿಂದ ಉಡುಪಿಯ ಸೋದೆ ಮಠದಲ್ಲಿ ಯಕ್ಷಗುರು ರಾಕೇಶ್ ರೈ ಅಡ್ಕ ಅವರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ಪ್ರತಿ ಮಂಗಳವಾರ ಸಂಜೆ 5 ರಿಂದ  6ರವರೆಗೆ ತರಗತಿಗಳು ನಡೆಯಲಿದ್ದು, ಪ್ರತಿಷ್ಠಾನದ ಕಾರ್ಯಕ್ಕೆ ಸೋದೆ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಮಠದಲ್ಲಿ ಸ್ಥಳಾವಕಾಶ ಒದಗಿಸಿದ್ದಾರೆ. ವಯಸ್ಸಿನ ಮಿತಿಯಿಲ್ಲದೆ ಆಸಕ್ತರು ನೇರವಾಗಿ ಮಂಗಳವಾರ ತರಗತಿಗೆ ಹಾಜರಾಗಬಹುದು ಎಂದು ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗೆ 9844212104 /9663424981/9845150802 ಸಂಪರ್ಕಿಸಬಹುದು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು