ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ ನಿಧನ

Last Updated 1 ಫೆಬ್ರುವರಿ 2021, 10:26 IST
ಅಕ್ಷರ ಗಾತ್ರ

ಉಡುಪಿ: ಕುಂದಾಪುರ ತಾಲ್ಲೂಕಿನ ವಂಡ್ಸೆ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ ವಂಡ್ಸೆ ನಾರಾಯಣ ಗಾಣಿಗ (84) ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ.

ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿದ್ದ ನಾರಾಯಣ ಗಾಣಿಗರು ದ್ರೌಪದಿ, ಮಂಡೋದರಿ, ಮೋಹಿನಿ ಸ್ತ್ರೀ ಪಾತ್ರಗಳಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದರು‌.

ಪೆರ್ಡೂರು, ಸಾಲಿಗ್ರಾಮ, ಮಂದಾರ್ತಿ, ಮಾರಣಕಟ್ಟೆ, ಇಡಗುಂಜಿ ಯಕ್ಷಗಾನ ಮೇಳಗಳಲ್ಲಿ ಮೂರು ದಶಕಗಳಿಗೂ ಹೆಚ್ಚುಕಾಲ ದುಡಿದಿದ್ದರು.

ನಾರಾಯಣ ಗಾಣಿಗರ ಕಲಾಸೇವೆಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳು ಸಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT