ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್. ಎಂ. ಹೆಗಡೆ, ಕೆ.ಎಲ್.ಕುಂಡಂತಾಯರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ

Last Updated 27 ಏಪ್ರಿಲ್ 2022, 16:33 IST
ಅಕ್ಷರ ಗಾತ್ರ

ಉಡುಪಿ: ಉಡುಪಿ ಯಕ್ಷಗಾನ ಕಲಾರಂಗವು ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಲೇಖಕ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ಕೊಡಮಾಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಕ್ರಮವಾಗಿ ಹಿರಿಯ ಅರ್ಥಧಾರಿ ಎಸ್. ಎಂ. ಹೆಗಡೆ ಹಾಗೂ ಅರ್ಥಧಾರಿ ಕೆ.ಎಲ್. ಕುಂಡಂತಾಯ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 20,000 ನಗದು ಹಾಗೂ ಪುರಸ್ಕಾರ ಒಳಗೊಂಡಿದೆ. ಮೇ 29ರಂದು ಸಂಜೆ 5 ಗಂಟೆಗೆ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ತಾಳಮದ್ದಲೆ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಎಸ್. ಎಂ. ಹೆಗಡೆ ಮುಡಾರೆಯವರು ಪ್ರಶಸ್ತಿಗೆ ಆಯ್ಕೆಯಾದ ನಂತರ ನಿಧನರಾಗಿರುವ ಹಿನ್ನೆಲೆಯಲ್ಲಿ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT