ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಳಮದ್ದಳೆ ಸಪ್ತಾಹ ಸಮಾರೋಪ

Last Updated 29 ಮೇ 2022, 15:34 IST
ಅಕ್ಷರ ಗಾತ್ರ

ಉಡುಪಿ: ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಕೃಷ್ಣಾಪುರ ಮಠದ ಆಶ್ರಯದಲ್ಲಿ ಉಡುಪಿ ಯಕ್ಷಗಾನ ಕಲಾರಂಗದ ಸಂಯೋಜನೆಯಲ್ಲಿ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ ನಡೆಯಿತು.

ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ‘ಮಟ್ಟಿ ಮುರಳೀಧರ ರಾವ್' ಪ್ರಶಸ್ತಿಯನ್ನು ಹಿರಿಯ ಅರ್ಥಧಾರಿ ಎಸ್.ಎಂ.ಹೆಗಡೆ ಮುಡಾರೆ ಅವರಿಗೆ ಮರಣೋತ್ತರವಾಗಿ ಅವರ ಪುತ್ರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಜಾನಪದ ವಿದ್ವಾಂಸ ಹಾಗೂ ಅರ್ಥಧಾರಿ ಕೆ.ಎಲ್.ಕುಂಡಂತಾಯ ಅವರಿಗೆ 'ಪೆರ್ಲ ಕೃಷ್ಣ ಭಟ್' ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಕ್ಷಗಾನ ಕಲೆಯನ್ನು ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ ಹಾಗೂ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಯಕ್ಷಗಾನ ಕಲಾರಂಗ ಮತ್ತಷ್ಟು ಉತ್ತಮ ರೀತಿಯಲ್ಲಿ ಬೆಳಗಲಿ ಎಂದು ಅನುಗ್ರಹಿಸಿದರು.

‘ಕಲಾಂತರಂಗ 2021-22’ ಸಂಚಿಕೆಯನ್ನು ಕರ್ನಾಟಕ ಬ್ಯಾಂಕಿನ ಮಹಾಪ್ರಬಂಧಕ ಪಿ.ಎಚ್‌.ರಾಜಕುಮಾರ ಬಿಡುಗಡೆಗೊಳಿಸಿದರು. ಹೊನ್ನಾವರದ ಉದ್ಯಮಿ ಕೃಷ್ಣಮೂರ್ತಿ ಭಟ್ ಶಿವಾನಿ, ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಳಿ ಕಡೆಕಾರ್, ನಾರಾಯಣ ಹೆಗಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT