ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಂಡದಕುಳಿ ರಾಮಚಂದ್ರ ಹೆಗಡೆಗೆ ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪ್ರಶಸ್ತಿ

Published 21 ಮಾರ್ಚ್ 2024, 4:30 IST
Last Updated 21 ಮಾರ್ಚ್ 2024, 4:30 IST
ಅಕ್ಷರ ಗಾತ್ರ

ಉಡುಪಿ: ವಿದ್ಯಾಮಾನ್ಯತೀರ್ಥ ಶ್ರೀಗಳ ಹೆಸರಿನಲ್ಲಿ ಪಲಿಮಾರು ಮಠಾಧೀಶರಾದ ವಿದ್ಯಾಧೀಶತೀರ್ಥ ಸ್ವಾಮೀಜಿ ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ಬಡಗುತಿಟ್ಟಿನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ಫಲಕ ಹಾಗೂ ₹50,000 ನಗದು ಪುರಸ್ಕಾರ ಒಳಗೊಂಡಿದ್ದು ಏ.23ರಂದು ಪಲಿಮಾರಿನಲ್ಲಿ ನಡೆಯುವ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪಲಿಮಾರು ಮಠದ ದಿವಾನರು ತಿಳಿಸಿದ್ದಾರೆ.

ಬಡಗುತಿಟ್ಟಿನ ಪರಂಪರೆಯ ಪ್ರಾತಿನಿಧಿಕ ವೇಷಧಾರಿಯಾಗಿರುವ ಕೊಂಡದಕುಳಿ ರಾಮಚಂದ್ರ ಹೆಗಡೆ ಅವರು ಗುಂಡುಬಾಳ, ಪಂಚಲಿಂಗ, ಸಾಲಿಗ್ರಾಮ ಮೇಳಗಳಲ್ಲಿ ಕಲಾಸೇವೆ ಮಾಡಿದ್ದಾರೆ. ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನ ಎಂಬ ಸ್ವಂತ ಮೇಳ ಸ್ಥಾಪಿಸಿ ಕಾಲಮಿತಿಯ ಪ್ರದರ್ಶನಗಳನ್ನು ನೀಡುತ್ತಾ ಬಂದಿದ್ದಾರೆ.

ನಾಲ್ಕೂವರೆ ದಶಕಗಳ ಕಲಾಜೀವನದಲ್ಲಿ ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿ, ಯಕ್ಷಗಾನ ಕಲಾಭಿಮಾನಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ ಎಂದು ಮಠದ ದಿವಾನರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT