ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಅವರನ್ನೂ ಸಮುದ್ರಕ್ಕೆ ವಿಸರ್ಜಿಸಲಾಗುವುದು: ಯಶ್‌ಪಾಲ್‌

Published : 6 ಸೆಪ್ಟೆಂಬರ್ 2024, 15:45 IST
Last Updated : 6 ಸೆಪ್ಟೆಂಬರ್ 2024, 15:45 IST
ಫಾಲೋ ಮಾಡಿ
Comments

ಉಡುಪಿ: ‘ಆಧುನಿಕತೆ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ವ್ಯಾಮೋಹದಲ್ಲಿರುವ ಯುವ ಪೀಳಿಗೆಯನ್ನು ಅದರಿಂದ ಹೊರ ತಂದು ಅವರಿಗೆ ನಮ್ಮ ಸಂಸ್ಕೃತಿ ಕಲಿಸಬೇಕಾದರೆ ಸರ್ಕಾರ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲೂ ಜಾನಪದ ವಿಭಾಗವನ್ನು ತೆರೆಯಬೇಕು’ ಎಂದು ಗಾಯಕ ಅಪ್ಪಗೆರೆ ತಿಮ್ಮರಾಜು ಸಲಹೆ ನೀಡಿದರು.

ಕುಂದಾಪುರ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ.ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಸರ್ಕಾರ ತಡೆ ಹಿಡಿದಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮಣಿಪಾಲದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಎಸ್‌ಡಿಪಿಐಯವರ ಮಾತು ಕೇಳಿ ಸರ್ಕಾರ ಪ್ರಶಸ್ತಿ ತಡೆಹಿಡಿದಿದೆ. ಎಸ್‌ಡಿಪಿಐ ಮತ್ತು ಕಾಂಗ್ರೆಸ್‌ ಒಂದೇ ನಾಣ್ಯದ ಎರಡು ಮುಖಗಳು. ಎಸ್‌ಡಿಪಿಐ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದೆ. ಅದಕ್ಕೆ ಕಾಂಗ್ರೆಸ್‌ ಬೆಂಬಲ ನೀಡುತ್ತಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ನಾಲ್ಕು ತಿಂಗಳಿಂದ ಸಂಬಳ ಸಿಗದ ಅಂಗನವಾಡಿ ಕಾರ್ಯಕರ್ತೆಯರಿಗೆ ಕೂಡಲೇ ಸಂಬಳ ಕೊಡಲಿ ಎಂದು ಸವಾಲು ಹಾಕಿದರು.

ರಾಮಕೃಷ್ಣ ಅವರು ಹಿಜಾಬ್‌ ವಿಷಯದಲ್ಲಿ ಸರ್ಕಾರದ ಆದೇಶವನ್ನಷ್ಟೇ ಪಾಲಿಸಿದ್ದಾರೆ. ಸರ್ಕಾರವು ಪ್ರಶಸ್ತಿಯನ್ನು ವಾಪಸ್‌ ಪಡೆಯುವ ಮೂಲಕ ಜೇನುಗೂಡಿಗೆ ಕೈಹಾಕುವ ಕೆಲಸ ಮಾಡಿದೆ ಎಂದರು.

ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇದ್ದರು.

ಬಿ.ಜಿ.ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯ ಮಟ್ಟದ
ಬಿ.ಜಿ.ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯ ಮಟ್ಟದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT