ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಲಾಕ್‌ಡೌನ್‌: ಆನ್‌ಲೈನ್‌ನಲ್ಲಿ ಯೋಗ

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಯೋಗ ದಿನಾಚರಣೆ
Last Updated 18 ಜೂನ್ 2021, 17:45 IST
ಅಕ್ಷರ ಗಾತ್ರ

ಉಡುಪಿ: 2015ರಿಂದ ಸಾಮೂಹಿಕ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಿಕೊಂಡು ಬರುತ್ತಿರುವಪತಂಜಲಿ ಯೋಗ ಶಿಕ್ಷಣ ಸಮಿತಿಯು ಈ ವರ್ಷವೂ ಆನ್‌ಲೈನ್‌ನಲ್ಲಿ ಯೋಗ ದಿನ ಆಚರಿಸುತ್ತಿದೆ.

ಕೋವಿಡ್‌ ಕಾರಣದಿಂದ ಸಾರ್ವಜನಿಕವಾಗಿ ಯೋಗ ದಿನ ಆಚರಣೆಗೆ ಅನುಮತಿ ಇಲ್ಲದ್ದರಿಂದ ಈ ವರ್ಷ ಆನ್‌ಲೈನ್‌ನಲ್ಲಿ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೂನ್ 21ರಂದು ಬೆಳಿಗ್ಗೆ 7 ರಿಂದ 7.45ರವರೆಗೆ ಸಾಮೂಹಿಕ ಯೋಗಾಭ್ಯಾಸ ಹಾಗೂ 7.45 ರಿಂದ 8.45 ರವರೆಗೆ ಆನ್‌ಲೈನ್‌ನಲ್ಲಿ ಯೋಗ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಭಾಗವಹಿಸಬಹುದು.

ಯೂಟ್ಯೂಬ್ ಹಾಗೂ ಫೇಸ್ ಬುಕ್ ಮೂಲಕ ಯೋಗ ಕಾರ್ಯಕ್ರಮ ವೀಕ್ಷಿಸಬಹುದಾಗಿದ್ದು, ಈಗಾಗಲೇ ಸಾವಿರಾರು ಮಂದಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಆಸಕ್ತರು ಯೂಟ್ಯೂಬ್ ಲಿಂಕ್ https://www.youtube.com/c/SPYSS ಮೂಲಕ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ 8618905127 ಸಂಪರ್ಕಿಸುವಂತೆ ಉಡುಪಿ ವಲಯದ ಜಿಲ್ಲಾ ಸಂಚಾಲಕರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಭಾಗವಹಿಸಲಿದ್ದಾರೆ. ಸಮಿತಿಯ ಅಧ್ಯಕ್ಷರಾದ ಮಹದೇವ್ ಅಧ್ಯಕ್ಷತೆ ವಹಿಸಲಿದ್ದಾರೆ.‌

ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಸೇರಿದಂತೆ ದೇಶ ವಿದೇಶಗಳಲ್ಲಿ ಶಾಖೆಗಳನ್ನು ಹೊಂದಿದ್ದು, ನಿತ್ಯ ಬೆಳಿಗ್ಗೆ ಹಾಗೂ ಸಂಜೆ ಲಕ್ಷಾಂತರ ಮಂದಿಗೆ ಯೋಗಾಸನ, ಪ್ರಾಣಾಯಾಮ ಹಾಗೂ ಧ್ಯಾನ ಹೇಳಿಕೊಡುತ್ತಿದೆ. ಆರೋಗ್ಯ ಶಿಕ್ಷಣ, ಸಂಸ್ಕೃತಿ, ಸ್ವಚ್ಛತೆ, ಒತ್ತಡ ರಹಿತ ವ್ಯವಸ್ಥಿತ ಜೀವನ, ವೃತ್ತಿ ಮತ್ತು ಆಧ್ಯಾತ್ಮಿಕ ಜೀವನದ ಮಾರ್ಗದರ್ಶನದಂತಹ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ.

ಸಮಿತಿಯ ಸೇವೆ ಪರಿಗಣಿಸಿ, ರಾಜ್ಯ ಸರ್ಕಾರ 2019ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಸ್ತುತ ವಿಶ್ವಾದ್ಯಂತ ಹರಡಿರುವ ಕೋವಿಡ್‌ ಪಿಡುಗು ಹಾಗೂ ಹವಾಮಾನ ವೈಪರೀತ್ಯದಿಂದಾಗುವ ದುಷ್ಪರಿಣಾಮಗಳನ್ನು ಧನಾತ್ಮಕವಾಗಿ ಎದುರಿಸಲು ಆನ್‌ಲೈನ್‌ನಲ್ಲಿ 500ಕ್ಕೂ ಹೆಚ್ಚು ತಂಡಗಳಿಗೆ ಯೋಗ, ಪ್ರಾಣಾಯಾಮ, ಧ್ಯಾನವನ್ನು ಉಚಿತವಾಗಿ ಹೇಳಿಕೊಡಲಾಗುತ್ತಿದೆ ಎಂದು ಸಮಿತಿ ತಿಳಿಸಿದೆ.

ಪತಂಜಲಿ ಯೋಗ ಶಿಕ್ಷಣ ಸಮಿತಿಯ ಕೇಂದ್ರ ಸಮಿತಿ ತುಮಕೂರಿನಲ್ಲಿ 1980 ರಲ್ಲಿ ಸಂಸ್ಕಾರ ಸಂಘಟನೆ ಸೇವೆ ಎಂಬ ಧೈಯೋದ್ದೇಶದೊಂದಿಗೆ ಪ್ರಾರಂಭಗೊಂಡು ಅಂದಿನಿಂದ ಇಂದಿನವರೆಗೆ ಯೋಗ ಪಂಚಮುಖಿ ಶಿಕ್ಷಣವನ್ನು ಉಚಿತವಾಗಿ ನೀಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT