ಭಾನುವಾರ, ಜುಲೈ 25, 2021
25 °C
ಬಂಧಿತರ ಸಂಖ್ಯೆ 5ಕ್ಕೇರಿಕೆ

ಯೋಗೀಶ್ ಕೊಲೆ ಪ್ರಕರಣ: ಮತ್ತೊಬ್ಬ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ತೆಂಕನಿಡಿಯೂರು ಗ್ರಾಮದ ಲಕ್ಷ್ಮೀ ನಗರದಲ್ಲಿ ಜುಲೈ 6ರಂದು ನಡೆದ ಯೋಗೀಶ್ ಕೊಲೆ ಪ್ರಕರಣದ ಆರೋಪಿ ಅನೂಪ್ ಕುಂದರ್ ಎಂಬಾತನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಸಂತೆಕಟ್ಟೆಯಲ್ಲಿ ಆರೋಪಿ ಅವಿತಿರುವ ಖಚಿತ ಮಾಹಿತಿ ಕಲೆಹಾಕಿದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ನಡೆಯುತ್ತಿದೆ ಎಂದು ಮಲ್ಪೆ ಠಾಣೆ ಪೊಲೀಸರು ತಿಳಿಸಿದ್ದಾರೆ.

ಯೋಗೀಶ್ ಕೊಲೆ ಪ್ರಕರಣದಲ್ಲಿ ಈಗಾಗಲೇ ರೋಹಿತ್ ಪಿಂಟೊ, ಸುಜಿತ್ ಪಿಂಟೊ, ಪ್ರದೀಪ್, ವಿನಯ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು