ಉಡುಪಿ: `ನಿವೇಶನ ಕೋರಿ ಅರ್ಜಿ ಸಲ್ಲಿಸಿರುವ ಅರ್ಹರಿಗೆ ಆದಷ್ಟು ಶೀಘ್ರ ನಿವೇಶನ ನೀಡಲು ಕ್ರಮ ಕೈಗೊಳ್ಳಿ' ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಮಾರ್ ಸೊರಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

`ಜಿಲ್ಲೆಯಲ್ಲಿ 13ಸಾವಿರ ಮಂದಿ ನಿವೇಶನ ರಹಿತರಿದ್ದಾರೆ ಮತ್ತು 13 ಸಾವಿರ ಜನರಿಗೆ ಹಕ್ಕುಪತ್ರ ದೊರೆತಿಲ್ಲ. ಮನೆ ಇಲ್ಲದವರಿಗೆ ಸೂಕ್ತ ನಿವೇಶನ ಗುರುತಿಸುವಂತೆ ತಿಳಿಸಲಾಗಿತ್ತು. ಆದರೆ ಈಗ ಗುರುತಿಸಿರುವ ಜಾಗ ಡೀಮ್ಡ ಅರಣ್ಯ ವ್ಯಾಪ್ತಿಗೆ ಬರುವುದರಿಂದ ನಿವೇಶನ ಒದಗಿಸಲು ಸಾಧ್ಯವಾಗಿಲ್ಲ' ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಎ. ಪ್ರಭಾಕರ ಶರ್ಮಾ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಡೀಮ್ಡ ಅರಣ್ಯ ವ್ಯಾಪ್ತಿಗೆ ಬರುವ ಪ್ರದೇಶದ ನಿವೇಶನ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ. ಜಿಲ್ಲೆಗೆ ಭೇಟಿ ನೀಡುವ ಅರಣ್ಯ ಸಚಿವರ ಜೊತೆ ಆಯಾ ಪ್ರದೇಶಗಳಿಗೆ ಭೇಟಿ ನೀಡಿ ಸಮಸ್ಯೆ ವಿವರಿಸಿ, ಬಗೆಹರಿಸುವಂತೆ ಕೋರಲಾ ಗುತ್ತದೆ ಎಂದರು.

ಡೀಮ್ಡ ಅರಣ್ಯ ವ್ಯಾಪ್ತಿಯ ಹೊರಗೆ ಜಾಗ ಗುರುತಿಸಿ, ನಿವೇಶನ ಕೋರಿ ಪಂಚಾಯಿತಿಗಳಿಗೆ ಬರುವ ಪ್ರಸ್ತಾವನೆ ಗಳನ್ನು ಶೀಘ್ರದಲ್ಲಿ ವಿಲೇವಾರಿ ಮಾಡಿ, ಹಕ್ಕುಪತ್ರಗಳನ್ನು ವಿತರಿಸಿ ಎಂದು ಅವರು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಪಡಿತರ ಚೀಟಿ ವಿತರಣೆ ಯಲ್ಲಿ ಆಗುತ್ತಿರುವ ವಿಳಂಬವನ್ನು ಸರಿಪಡಿಸಲು ಉಡುಪಿಯಲ್ಲಿ 14 ಹೊಸ ಫ್ರಾಂಚೈಸಿಗಳಿಗೆ ಅನುಮತಿಯನ್ನು ನೀಡಲಾಗಿದೆ. ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಆದ್ಯತೆಯ ಮೇಲೆ ಪಡಿತರ ಚೀಟಿ ನೊಂದಣಿಯನ್ನು ಮಾಡಿ. ಜಿಲ್ಲೆಯಲ್ಲಿ ರದ್ದುಗೊಂಡಿರುವ ಪಡಿತರ ಚೀಟಿ ಕುರಿತು ಹಾಗೂ ಪಡಿತರ ಸಮಸ್ಯೆಗಳ ಕುರಿತು ಜಿಲ್ಲೆಗೆ ಭೇಟಿ ನೀಡುವ ಆಹಾರ ಮತ್ತು ನಾಗರಿಕ ಸರಬ ರಾಜು ಇಲಾಖೆಯ ಸಚಿವ ರೊಂದಿಗೆ ಚರ್ಚಿಸಲಾಗುತ್ತದೆ. ಆ ಸಂದರ್ಭದಲ್ಲಿ ಎಲ್ಲಾ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಓಗಳು ಹಾಜರಿರಬೇಕು ಎಂದರು.

ವಸತಿ ಯೋಜನೆಗಳಲ್ಲಿ ನೀಡಿರುವ ಸಂಪೂರ್ಣ ಗುರಿಯನ್ನು ಸಾಧಿಸುವಂತೆ ಮತ್ತು ಬ್ಲಾಕ್ ಆಗಿರುವ ಮನೆಗಳ ವಿವರ ನೀಡಿ ಎಂದ ಸಚಿವರು, ವಸತಿ ಯೋಜನೆಗಳ ಸಂಪೂರ್ಣ ಅನುಷ್ಠಾನ ಕ್ಕಾಗಿ ಅಧಿಕಾರಿಗಳು ಮತ್ತು ಸಂಬಂದ ಪಟ್ಟ ಪಂಚಾಯಿತಿಗಳು ಕಾರ್ಯ ನಿರ್ವಹಿಸಬೇಕು. ಸುವರ್ಣ ಗ್ರಾಮ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿರುವ ಗ್ರಾಮ ಪಂಚಾಯತಿಗಳ ವಿವರಗಳನ್ನು ನೀಡುವಂತೆ ತಾಲ್ಲೂಕು ಪಂಚಾಯಿತಿ ಇಒಗೆ ಸೂಚಿಸಿದರು.

ಕಸ ವಿಲೇವಾರಿಗೆ ಜಾಗದ ಸಮಸ್ಯೆ ಇರುವ ಗ್ರಾಮಗಳಲ್ಲಿ ಸೂಕ್ತ ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಿ ಎಂದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗೌರಿ ಪೂಜಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಇಒ ಮಂಜುನಾಥಯ್ಯ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.