ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ:ಮತದಾನ ಜಾಗೃತಿಗೆ ರಂಗೋಲಿ ಚಿತ್ತಾರ

Last Updated 12 ಏಪ್ರಿಲ್ 2014, 5:39 IST
ಅಕ್ಷರ ಗಾತ್ರ

ಉಡುಪಿ: ಮತದಾನದ ಮಹತ್ವವನ್ನು ತಿಳಿಸಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ‘ಸ್ವೀಪ್‌’ ಸಮಿತಿಯು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದ ಮುಂಭಾಗ ಶುಕ್ರವಾರ ರಂಗೋಲಿ ಸ್ಪರ್ಧೆ ಏರ್ಪಡಿಸಿತ್ತು.  ಜಿಲ್ಲಾಧಿಕಾರಿ ಡಾ.ಮುದ್ದುಮೋಹನ್‌ ಮತ್ತು ಸ್ವೀಪ್‌ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಎಂ.ಕನಗವಲ್ಲಿ ಅವರು ರಂಗೋಲಿಗೆ ಬಣ್ಣ ಹಾಕುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.

ಉಡುಪಿ– ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರು ಅತ್ಯಂತ ಪ್ರಜ್ಞಾವಂ ತರಾಗಿದ್ದು, ಕಳೆದ ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ ೬೮ರಷ್ಟು ಮಂದಿ ಮತದಾನ ಮಾಡಿದ್ದಾರೆ. ಈ ವರ್ಷ ಮತದಾನ ಪ್ರಮಾಣವನ್ನು  ಶೇ ೮೦ ರಿಂದ ೮೫ಕ್ಕೆ ಏರಿಸಲು  ಶ್ರಮಿಸಲಾಗುತ್ತಿದೆ. ಚುನಾವಣೆಯಲ್ಲಿ ಎಲ್ಲ ಸ್ತರದ ಜನರೂ ತಪ್ಪದೇ ಮತದಾನ ಮಾಡ ಬೇಕು ಎಂದು  ಕರೆ ನೀಡಿದರು.

ಈ ರಂಗೋಲಿ ಸ್ಪರ್ಧೆಯಲ್ಲಿ ಬಿಡಿಸಿ ರುವ ರಂಗೋಲಿಗಳು ಕ್ರಿಯಾತ್ಮಕತೆ ಮತ್ತು ಉತ್ತಮ ಸಂದೇಶಗಳಿಂದ ಕೂಡಿದ್ದು, ಜನ ಸಾಮಾನ್ಯರಲ್ಲಿ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದು ಅವರು ಸ್ವೀಪ್ ಸಮಿತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ರಂಗೋಲಿ ಸ್ಪರ್ಧೆಯಲ್ಲಿ ಒಟ್ಟು ೫೦ ತಂಡಗಳ ಸುಮಾರು ೨೦೦ ಮಂದಿ ಎಪಿಕ್ ಕಾರ್ಡ್ ಹೊಂದಿರುವ ಮತದಾರರು ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆಗಳನ್ನು ವಿತರಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಿ. ಪ್ರಾಣೇಶ್ ರಾವ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯರಿ, ಶಿಶು ಅಭಿವೃದ್ಧಿ ಯೋಜ ನಾಧಿಕಾರಿ ಸದಾನಂದ ನಾಯಕ್‌, ನಗರಸಭೆಯ ಪರಿಸರ ಎಂಜಿನಿಯರ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT