ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಪಟ್ಟಿ ಧರಿಸಿ ಸಿಬ್ಬಂದಿ ಪ್ರತಿಭಟನೆ

Last Updated 10 ನವೆಂಬರ್ 2017, 10:18 IST
ಅಕ್ಷರ ಗಾತ್ರ

ಕುಂದಾಪುರ: ಇಲ್ಲಿನ ಸರ್ಕಾರಿ ಆಸ್ಪ ತ್ರೆಯ ಮುಖ್ಯ ವೈದ್ಯಾಧಿಕಾರಿ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಯ ಸಿಬ್ಬಂದಿ ಗುರುವಾರ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

‘ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾ ಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಉದಯ್‌ ಶಂಕರ ಅವರು ವರ್ಗಾ ವಣೆಯಾದ ಬಳಿಕ ಅವರ ಸ್ಥಾನದಲ್ಲಿ ಅಧಿಕಾರ ವಹಿಸಿಕೊಂಡಿರುವ ಡಾ. ರಾಬರ್ಟ್‌ ರೆಬೆಲ್ಲೊ ತಮಗೆಲ್ಲರಿಗೂ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ’ ಎನ್ನು ವುದು ಸಿಬ್ಬಂದಿಗಳ ಆರೋಪ.

‘ಅವರು ಅಧಿಕಾರವನ್ನು ವಹಿಸಿಕೊಂಡ ಬಳಿಕ ಹೊಸ ನಿಯ ಮಗಳನ್ನು ಜಾರಿಗೆ ತಂದಿದ್ದಾರೆ. ಈ ಹಿಂದೆ ಸಿಬ್ಬಂದಿ ತಂಡವಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ಜಾರಿಗೆ ತಂದಿರುವ ನಿಯಮಾವಳಿಗಳು ಅವೈಜ್ಞಾನಿಕವಾಗಿದ್ದು, ಈ ಕ್ರಮ ವನ್ನೇ ಅನುಸರಿಸಲು ಒತ್ತಾಯ ಹೇರಲಾಗುತ್ತಿದೆ’ ಎಂದು ಅವರು ಆರೋಪಿಸಿದರು.

‘ರಾತ್ರಿ ವೇಳೆ ಆಸ್ಪತ್ರೆಯಿಂದ ದೂರವಾಣಿ ಕರೆ ಬಂದಿದೆ. ಏನೋ ಗಂಭೀರ ಸಮಸ್ಯೆ ಇರಬಹುದು ಎನ್ನುವ ಕಾರಣಕ್ಕಾಗಿ ನನ್ನ ಪತಿಯೊಡನೆ ನಾನು ಆಸ್ಪತ್ರೆಗೆ ಬಂದರೆ’, ‘ಅವರು ಯಾರು’ ಎಂದು ಪ್ರಶ್ನಿಸಿದ್ದಲ್ಲದೆ ‘ಅವರನ್ನೆಲ್ಲ ಇಲ್ಲಿಗೆ ಕರೆದುಕೊಂಡು ಬರಬಾರದು’ ಎಂದು ಕಟ್ಟಪ್ಪಣೆ ಮಾಡುತ್ತಾರೆ ಎಂದು ಆರೋಪ ಮಾಡುವ ಮುಖ್ಯ ಶುಶ್ರೂಷಕಿ ಪುಷ್ಪ ಅವರು ‘ಮಹಿಳೆಯಾದ ನಾನು ರಾತ್ರಿ ವೇಳೆಯಲ್ಲಿ ಮನೆಯವರನ್ನಲ್ಲದೇ ಇನ್ಯಾರನ್ನು ಕರೆತರಬೇಕು’ ಎಂದು ಪ್ರಶ್ನಿಸುತ್ತಾರೆ.

‘ರಾತ್ರಿ ಪಾಳಿಯಲ್ಲಿಯೂ ಅನ ಗತ್ಯ ಕಿರುಕುಳ ನೀಡಲಾಗುತ್ತಿದೆ. ನಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಮನವಿ ಮಾಡಲಾಗಿದ್ದು, ನ್ಯಾಯ ದೊರಕುವ ವಿಶ್ವಾಸವಿದೆ. ಕುಂದಾಪುರ ಆಸ್ಪತ್ರೆಯಲ್ಲಿ 29 ಶುಶ್ರೂಷಕಿಯರು ಸೇರಿದಂತೆ ಒಟ್ಟು 50 ಸಿಬ್ಬಂದಿ ಕರ್ತವ್ಯ ನಿರ್ವಹಿ ಸುತ್ತಿದ್ದೇವೆ.

ಕುಂದಾಪುರ ತಾಲ್ಲೂಕಿನ ಜನರಷ್ಟೇ ಅಲ್ಲದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹಾಗೂ ಇತರ ಭಾಗಗ ಳಿಂದಲೂ ದೊಡ್ಡ ಸಂಖ್ಯೆಯಲ್ಲಿ ರೋಗಿ ಗಳು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ. ಅವರಿಗೆ ತೊಂದರೆಯಾಗ ಬಾರದು ಎನ್ನುವ ಏಕೈಕ ಉದ್ದೇಶದಿಂದ ಕಪ್ಪು ಪಟ್ಟಿಯನ್ನು ಧರಿಸುವ ಮೂಲಕ ನಮ ಗಾಗುತ್ತಿರುವ ನೋವನ್ನು ತಿಳಿಸುವ ಪ್ರಯತ್ನ ಮಾಡಿದ್ದೇವೆ’ ಎಂದು ಪ್ರತಿಭಟನಾ ನಿರತ ಸಿಬ್ಬಂದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT