ಚಿಕ್ಕಮಗಳೂರು: ಭಾರತ್ ನಿರ್ಮಾಣ ಯಾತ್ರೆ ಅಂಗವಾಗಿ ನಗರದಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ಕಾಲ್ನಡಿಗೆ ಜಾಥಾ ನಡೆಸಿದರು.

ಹಳೇ ತಾಲ್ಲೂಕು ಕಚೇರಿ ಆವರಣದಿಂದ ಆರಂಭಗೊಂಡ ಜಾಥಾ ನಗರದ ಮುಖ್ಯ ರಸ್ತೆಯಲ್ಲಿ ಸಂಚರಿಸಿ ಕಾರ್ಯಕ್ರಮ ನಡೆಯುವ ಗಾಯತ್ರಿದೇವಿ ಕಲ್ಯಾಣ ಮಂಟಪ ತಲುಪಿತು.

ಕಾಲ್ನಡಿಗೆ ಜಾಥಾ ಸಾಗುವಾಗ ಮುಖ್ಯ ವೃತ್ತಗಳಲ್ಲಿ ಪಟಾಕಿ ಸಿಡಿಸಲಾಯಿತು. ಪಕ್ಷದ ಜಿಲ್ಲಾ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್, ವಿಧಾನ ಪರಿಷತ್ ಸದಸ್ಯೆ ಮೋಟಮ್ಮ, ಪಕ್ಷದ ಮಾಜಿ ಜಿಲ್ಲಾ ಅಧ್ಯಕ್ಷ ಎಂ.ಎಲ್.ಮೂರ್ತಿ, ಮಹಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್, ಕಿಸಾನ್ ಕೇತ್ ಮಜ್ದೂರ್ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಸಚಿನ್ ಮೀಗಾ, ಉಪಾಧ್ಯಕ್ಷ ಕೆ.ಎಸ್. ಶಾಂತೇಗೌಡ, ಬ್ಲಾಕ್ ಅಧ್ಯಕ್ಷ ಉರಾಳ್, ಪ್ರಧಾನ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಸೇವಾ ದಳ ಅಧ್ಯಕ್ಷ ಆನಂದ್ ಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವನಮಾಲ ಮೃತ್ಯುಂಜಯ, ಯುವ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್, ನಗರಸಭಾ ಸದಸ್ಯರಾದ ಹಿರೇಮಗಳೂರು ಪುಟ್ಟಸ್ವಾಮಿ, ರೂಬೆನ್ ಮೊಸಸ್, ಸುರೇಖಾ, ಜಗದೀಶ್, ಲಕ್ಷ್ಮಣ್ ಇದ್ದರು.

ಸಂಸದ ಜಯಪ್ರಕಾಶಹೆಗ್ಡೆ ಮಾತನಾಡಿ, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಈ ಚುನಾವಣೆಯಲ್ಲಿ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಯುಪಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಆಗಿರುವ ಕೆಲಸಗಳನ್ನು ಕಾರ್ಯಕರ್ತರು ಮತ್ತು ಮುಖಂಡರು ಜನರಿಗೆ ತಿಳಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ಮಾತನಾಡಿ, ಸರಳ ವ್ಯಕ್ತಿತ್ವದ ಸಂಸದ ಹೆಗ್ಡೆ ಗೆಲುವಿಗೆ ಎಲ್ಲರೂ ಶ್ರಮಿಸಬೇಕಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.