ಕಾಪು (ಪಡುಬಿದ್ರಿ):  ಉಡುಪಿ-ಚಿಕ್ಕಮಗಳೂರು ಉಪಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಹುನ್ನಾರ ನಡೆಸುತಿದ್ದು, ಅದು ಎಂದಿಗೂ ಸಾಧ್ಯವಿಲ್ಲ ಎಂದು ರಾಜ್ಯಸಭಾ ಉಪಸಭಾಪತಿ ರೆಹಮಾನ್ ಖಾನ್ ಅಭಿಪ್ರಾಯಪಟ್ಟರು.

ಕಾಪುವಿನ ರಾಜೀವ್ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದ್ದು, ಜಯಪ್ರಕಾಶ್ ಹೆಗ್ಡೆ ಭಾರಿ ಅಂತರದಿಂದ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

`ಕಾಪು ಕ್ಷೇತ್ರದ ಶಿರ್ವ, ಹೆಜಮಾಡಿ, ಮುದರಂಗಡಿ, ಮೂಳೂರು ಚರ್ಚ್, ಮಸೀದಿ, ದೇವಸ್ಥಾಗಳಿಗೆ ಭೇಟಿ ನೀಡಿ ಜನರೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಕಾಪು ಕ್ಷೇತ್ರದಲ್ಲಿ ಕಾಂಗ್ರೆಸ್ ಬಗ್ಗೆ ಜನರಲ್ಲಿ ಒಳವು ಇದೆ ಎಂದು ಹೇಳಿದ ರೆಹಮಾನ್ ಖಾನ್, ಕೇಂದ್ರ ಸರ್ಕಾರದ ಹಲವು ಜನಪರ ಯೋಜನೆಗಳು ಚುನಾವಣೆ ಗೆಲ್ಲಲು ಸಹಕಾರಿಯಾಗಲಿದೆ. ರಾಜ್ಯ ಸರ್ಕಾರದ ವೈಫಲ್ಯದಿಂದ ಜನರೂ ಬಿಜೆಪಿ ಬಗ್ಗೆ ಭ್ರಮನಿರಸನಗೊಂಡಿದ್ದಾರೆ. ಅಲ್ಪಸಂಖ್ಯಾತರು ಕಾಂಗ್ರೆಸ್ ಕೈಬಿಡುವುದಿಲ್ಲ~ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ವಸಂತ ವಿ.ಸಾಲ್ಯಾನ್, ಗಂಗಾಧರ ಸುವರ್ಣ, ಐವನ್ ಡಿಸೋಜ, ಮೊಯಿದಿನ್ ಬಾವಾ, ಶಶಿಧರ ಹೆಗ್ಡೆ, ಕೆ.ಅಶ್ರಫ್, ನವೀನ್ಚಂದ್ರ ಆಳ್ವ, ಜಯಶೆಟ್ಟಿ, ನವೀನ್ ಶೆಟ್ಟಿ, ದಿವಾಕರ ಶೆಟ್ಟಿ, ಶ್ರಿಕರ ಸುವರ್ಣ, ಎಂ.ಪಿ.ಮೊಯಿದಿನಬ್ಬ, ಅಝ್ೀ ಹೆಜ್ಮಾಡಿ, ಇಸ್ಮಾಯೀಲ್ ಆತ್ರಾಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.