ಹೆಬ್ರಿ: ಮುದ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ಇತ್ತೀಚೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮಸಭೆ ನಡೆಯಿತು.

ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ವಾರ್ಡ್ ಸಭೆಯಲ್ಲಿ ಗ್ರಾಮಸ್ಥರಿಂದ ಬಂದ ಅರ್ಜಿಗಳನ್ನು ಮಂಡಿಸಿ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಮಾರ್ಗದರ್ಶಿ ಅಧಿಕಾರಿಯಾದ ತಾಲ್ಲೂಕು ಸಂಯೋಜಕಿ ವಾಣಿ ಉಪಾಧ್ಯಾಯ ಯೋಜನೆಯ ಸಮಗ್ರ ಮಾಹಿತಿ ನೀಡಿದರು.

ಮುದ್ರಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗುಣವತಿ ಶೆಟ್ಟಿಗಾರ್, ಮಾಜಿ ಅಧ್ಯಕ್ಷರಾದ ಕಬ್ಬಿನಾಲೆ ಚಂದ್ರಶೇಖರ ಬಾಯರಿ, ಗುಂಡಾಳ ಸದಾಶಿವ ಶೆಟ್ಟಿ, ಪಂಚಾಯಿತಿ ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೀರಯ್ಯ, ಕಾರ್ಯದರ್ಶಿ ಸದಾಶಿವ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.