ಉಡುಪಿ: ಭಾರತ ಸರ್ಕಾರವು ಮಕ್ಕಳ ಸೇವೆಯಲ್ಲಿ ನಿರತರಾದ ವ್ಯಕ್ತಿಗಳಿಗೆ ನೀಡುವ ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರ ದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನೀಡುವ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
ಮಕ್ಕಳ ಶ್ರೇಯೋಭಿವೃದ್ಧಿಗಾಗಿ 10 ವರ್ಷಕಿಂತಲೂ ಹೆಚ್ಚು ಕಾರ್ಯನಿರ್ವಹಿಸಿದವರು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಮೂರು ವ್ಯಕ್ತಿಗತ ಮತ್ತು ಐದು ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, ವ್ಯಕ್ತಿಗತ ಪ್ರಶಸ್ತಿ ₹1 ಲಕ್ಷ ನಗದು ಹಾಗೂ ಸಂಘ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿ ₹3 ಲಕ್ಷ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಅರ್ಹ ವ್ಯಕ್ತಿಗಳು ಮತ್ತು ಸಂಘ ಸಂಸ್ಥೆಗಳು ಆಂಗ್ಲ ಭಾಷೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಇದೇ 25ರೊಳಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಲ್ಲಿಸಬೇಕು. ಮಾಹಿತಿಗೆ ದೂರವಾಣಿ 0820– 2524 928ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.