ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿ.ವಿ ಮಟ್ಟದ ವಾಲಿಬಾಲ್‌: ಆಳ್ವಾಸ್‌ ಪ್ರಥಮ

Last Updated 20 ಡಿಸೆಂಬರ್ 2013, 9:26 IST
ಅಕ್ಷರ ಗಾತ್ರ

ಉಡುಪಿ: ನಗರದ ಪೂರ್ಣಪ್ರಜ್ಞ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ಜಂಟಿ ಆಶ್ರಯದಲ್ಲಿ ನಡೆದ ಸೌಕೂರು ಅಂತಯ್ಯ ಶೆಟ್ಟಿ ಸ್ಮಾರಕ ವಿಶ್ವವಿದ್ಯಾಲಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ಪ್ರಥಮ ಬಹುಮಾನ ಪಡೆದಿದೆ.

ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು. ಮಂಗಳೂರು ವಿ.ವಿ. ವ್ಯಾಪ್ತಿಯ ಒಟ್ಟು 47 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಬುಧವಾರ ನಡೆದ ಕಾರ್ಯಕ್ರಮ­ದಲ್ಲಿ ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ವಿಜೇತ ತಂಡಕ್ಕೆ ಬಹುಮಾನ ವಿತರಿಸಿದರು. ಪ್ರಥಮ ಬಹುಮಾನ ಹತ್ತು ಸಾವಿರ ರೂಪಾಯಿ ಹಾಗೂ ಫಲಕ ಒಳಗೊಂಡಿದೆ.

ಶೀರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಪೂರ್ಣಪ್ರಜ್ಞ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಪ್ರದೀಪ್ ಕುಮಾರ್, ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ವಿಭಾ­ಗದ ಉಪನಿರ್ದೇಶಕ ಡಾ. ಕಿಶೋರ್‌ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಕೆ.ಸದಾಶಿವ ರಾವ್ ಅಧ್ಯಕ್ಷತೆ ವಹಿಸಿದ್ದರು.ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಬಿ. ಜಗದೀಶ್ ಶೆಟ್ಟಿ ವಿಜೇತ ತಂಡಗಳ ವಿವರ ನೀಡಿದರು.

ಹಿಂದಿ ವಿಭಾಗದ ಮುಖ್ಯಸ್ಥೆ ಡಾ.ಸುಕನ್ಯಾ ಸ್ವಾಗತಿಸಿದರೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್ ವಂದಿಸಿದರು. ಕನ್ನಡ ಉಪನ್ಯಾಸಕ ಮಂಜುನಾಥ ಕರಬ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT