ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮುದಾಯಕ್ಕೆ ಧರ್ಮಸ್ಥಳದ ಕೊಡುಗೆ ಅಪಾರ’

Last Updated 2 ಮಾರ್ಚ್ 2015, 11:14 IST
ಅಕ್ಷರ ಗಾತ್ರ

ಮೂಲ್ಕಿ:    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ­ಯಿಂದ ಗ್ರಾಮಾಭಿವೃದ್ಧಿಗೆ ಸಮುದಾ­ಯದ ನೆರವು ನಿರಂತರವಾಗಿ ಸಿಗುತ್ತಿದ್ದು ಇದರಿಂದ ಗ್ರಾಮದ ಅಭ್ಯುದಯಕ್ಕೆ ಸಹಕಾರ ಸಿಕ್ಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ಸುವರ್ಣ ಹೇಳಿದರು.

ಅವರು ಹಳೆಯಂಗಡಿ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಗೆ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ­ಯಿಂದ ಮಂಜೂರಾದ ಸಿಲಿಕಾನ್ ಚೇಂಬರ್ ಹಾಗೂ ತಾಲ್ಲೂಕು ಪಂಚಾಯಿತಿಯ ಅನು­ದಾನದಿಂದ ಸೌರ ವಿದ್ಯುತ್ ದೀಪವನ್ನು ಉದ್ಘಾಟಿಸಿ ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ, ತಾಲ್ಲೂಕು ಪಂಚಾ­ಯಿತಿ ಸದಸ್ಯೆ ಸಾವಿತ್ರಿ .ಜಿ.ಸುವರ್ಣ, ಹಳೆಯಂಗಡಿ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮಾ ಮಧು, ಹಳೆಯಂಗಡಿ ಪಿ.ಸಿ.ಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು, ಹಿಂದೂ ರುದ್ರಭೂಮಿ ನಿರ್ವ­ಹಣಾ ಸಮಿತಿಯ ಅಧ್ಯಕ್ಷ ಪ್ರಕಾಶ್ ಕಾಮೆ­ರೊಟ್ಟು, ಹಳೆಯಂಗಡಿ ಸಾರ್ವಜನಿಕ ಗಣೆಶೋತ್ಸವ ಸಮಿ­ತಿಯ ಅಧ್ಯಕ್ಷ ಜಯಶೀಲ ಕೋಟ್ಯಾನ್ ಇನ್ನಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT