ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

​ವಿಜಯಪುರ: ರಾಷ್ಟ್ರೀಯ ಯೋಜನೆಯಾಗಿಸಲು ಪ್ರಯತ್ನ; ರಮೇಶ್ ಜಾರಕಿಹೊಳಿ

‘ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3 ರ ಯೋಜನೆ
Last Updated 28 ಏಪ್ರಿಲ್ 2020, 10:58 IST
ಅಕ್ಷರ ಗಾತ್ರ

ವಿಜಯಪುರ: ‘ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3 ರ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಚಿಂತನೆ ನಡೆದಿದ್ದು, ಈ ಬಗ್ಗೆ ಕೇಂದ್ರದ ಜಲಸಂಪನ್ಮೂಲ ಸಚಿವರ ಜೊತೆಯೂ ಚರ್ಚಿಸಲಾಗಿದೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಲಾಕ್‌ಡೌನ್ ಹಿನ್ನಲೆಯಲ್ಲಿ ಈ ಕಾರ್ಯಕ್ಕೆ ಅಲ್ಪ ಅಡೆತಡೆಯಾಗಿದೆ ಎಂದು ಆಲಮಟ್ಟಿಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೃಷ್ಣಾ ನದಿ ನೀರು ಬಳಕೆಗಾಗಿ ಕೇಂದ್ರ ಸರ್ಕಾರದ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದರು.

ಕೃಷ್ಣಾ ನದಿ ನೀರಿನ ಸದ್ಭಳಕೆಗಿರುವ ಕಾನೂನು ತೊಡಕುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ, ಈ ಬಗ್ಗೆ ಸಾಕಷ್ಟು ಬಾರಿ ಕಾನೂನು ತಜ್ಞರು, ವಕೀಲರ ಜತೆ ಚರ್ಚಿಸಲಾಗಿದೆ.

ಜಲಾಶಯ ಏರಿಕೆ: ಆಲಮಟ್ಟಿ ಜಲಾಶಯವನ್ನು 519.6 ಮೀ. ನಿಂದ 524.256 ಮೀ. ವರೆಗೆ ಹಂತ ಹಂತವಾಗಿ ಏರಿಸಬೇಕೆನ್ನುವ ಪ್ರಸ್ತಾವ ಸರ್ಕಾರದ ಮುಂದಿದೆ. ಮೊದಲು ಯುಕೆಪಿ ಎರಡನೇ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ನೋಟಿಫಿಕೇಷನ್ ಜಾರಿಗೊಳಿಸುವತ್ತ ಗಮನಹರಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT