ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿತ್ತೂರ ಚನ್ನಮ್ಮ ಬಾಲಕಿಯರ ವಸತಿ ನಿಲಯದ 19 ವಿದ್ಯಾರ್ಥಿನಿಯರಿಗೆ ಕೋವಿಡ್-19 ದೃಢ

Last Updated 20 ಡಿಸೆಂಬರ್ 2021, 14:28 IST
ಅಕ್ಷರ ಗಾತ್ರ

ಕಾರವಾರ: ಜೊಯಿಡಾ ತಾಲ್ಲೂಕಿನ ರಾಮನಗರದಲ್ಲಿರುವ ಕಿತ್ತೂರ ಚನ್ನಮ್ಮ ಬಾಲಕಿಯರ ವಸತಿ ನಿಲಯದಲ್ಲಿ 19 ವಿದ್ಯಾರ್ಥಿನಿಯರಿಗೆ ಕೋವಿಡ್–19 ದೃಢಪಟ್ಟಿದೆ. ವಸತಿ ನಿಲಯವನ್ನು ‘ನಿರ್ಬಂಧಿತ ವಲಯ’ ಎಂದು ಘೋಷಿಸಲಾಗಿದೆ.

ಇಲ್ಲಿಗೆ ಸೋಮವಾರ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ಸೋಂಕಿತರಿಗೆ ವಸತಿ ನಿಲಯದ ಮೇಲಿನ ಮಹಡಿಯಲ್ಲಿ ಉಳಿದುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಮಾಡುವಂತೆ ತಾಲ್ಲೂಕು ಆರೋಗ್ಯಾಧಿಕಾರಿಗೆ ನಿರ್ದೇಶನ ನೀಡಿದರು.

‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ಎಲ್ಲ ವಿದ್ಯಾರ್ಥಿಗಳ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಬೇಕು. ವಸತಿ ನಿಲಯವನ್ನು ಪ್ರತಿದಿನ ಸ್ಯಾನಿಟೈಸ್ ಮಾಡಬೇಕು. ಸೋಂಕಿತರಿಗೆ ಜೊಯಿಡಾ ತಾಲ್ಲೂಕು ಆಸ್ಪತ್ರೆ ಮತ್ತು ರಾಮನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT