ಬುಧವಾರ, ಆಗಸ್ಟ್ 4, 2021
22 °C
ಬಹುತೇಕರು ಈಗಾಗಲೇ ಸೋಂಕಿತರಾದವರ ಸಂಪರ್ಕಕ್ಕೆ ಬಂದವರು

23 ಮಂದಿಗೆ ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಜಿಲ್ಲೆಯಲ್ಲಿ ಬುಧವಾರ ಒಟ್ಟು 23 ಮಂದಿಗೆ ಕೋವಿಡ್ 19 ದೃಢಪಟ್ಟಿದೆ. ಈ ಪೈಕಿ ಭಟ್ಕಳ ಮತ್ತು ಅಂಕೋಲಾದಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರೇ ಅಧಿಕ ಸಂಖ್ಯೆಯಲ್ಲಿದ್ದಾರೆ.

ಭಟ್ಕಳದ ಸೋಂಕಿತನ (ಪಿ 12047) ಪ್ರಾಥಮಿಕ ಸಂಪರ್ಕಕ್ಕೆ ಬಂದ 47 ವರ್ಷದ ಇಬ್ಬರು, 33, 42 ವರ್ಷದ ಪುರುಷರಿಗೆ ಸೋಂಕು ದೃಢಪಟ್ಟಿದೆ. ಅಂತೆಯೇ, 47, 41 ವರ್ಷದ ಮಹಿಳೆಯರು, 20 ವರ್ಷದ ಯುವತಿ, 11, 12, 13 ವರ್ಷದ ಬಾಲಕಿಯರಿಗೆ ಕೋವಿಡ್ ಖಚಿತವಾಗಿದೆ. ಚೆನ್ನೈನಿಂದ ಬಂದಿರುವ 27 ವರ್ಷದ ಯುವಕ ಕೂಡ ಸೋಂಕಿತರಾಗಿದ್ದಾರೆ.

ಕುಮಟಾ ತಾಲ್ಲೂಕಿನಲ್ಲಿ ಆರು ಮಂದಿಗೆ ಸೋಂಕು ದೃಢಪಟ್ಟಿದ್ದು, ಎಲ್ಲರೂ ಮಹಾರಾಷ್ಟ್ರದಿಂದ ವಾಪಸಾಗಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇದ್ದವರಾಗಿದ್ದಾರೆ. ಅವರಲ್ಲಿ 14 ವರ್ಷದ ಬಾಲಕಿ, 22 ವರ್ಷದ ಯುವಕ, 40, 51, 40 ವರ್ಷದ ಮಹಿಳೆಯರು ಹಾಗೂ 53 ವರ್ಷದ ಪುರುಷ ಒಳಗೊಂಡಿದ್ದಾರೆ.

ಅಂಕೋಲಾ ತಾಲ್ಲೂಕಿನಲ್ಲಿ ಐವರಿಗೆ ಸೋಂಕು ಕಾಣಿಸಿಕೊಂಡಿದ್ದು, ಎಲ್ಲರೂ ಸೋಂಕಿತರೊಬ್ಬರ (ಪಿ 10648) ಪ್ರಾಥಮಿಕ ಸಂಪರ್ಕಕ್ಕೆ ಬಂದವರಾಗಿದ್ದಾರೆ. ಅವರಲ್ಲಿ 49, 37 ವರ್ಷದ ಪುರುಷರು, 80 ವರ್ಷದ ಮಹಿಳೆ, 21 ವರ್ಷದ ಯುವತಿ ಹಾಗೂ 4 ವರ್ಷದ ಬಾಲಕಿ ಒಳಗೊಂಡಿದ್ದಾರೆ.

ಕಾರವಾರ ತಾಲ್ಲೂಕಿನಲ್ಲಿ 27 ವರ್ಷದ ಯುವಕರೊಬ್ಬರಿಗೆ ಕೋವಿಡ್ ದೃಢಪಟ್ಟಿದ್ದು, ಅವರಿಗೆ ಸೋಂಕಿನ ಮೂಲವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚುವ ಕಾರ್ಯದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು