ಯಲ್ಲಾಪುರ: ಭೀಕರ ಅಪಘಾತದಲ್ಲಿ ಮಗು ಸಾವು

ಯಲ್ಲಾಪುರ: ರಸ್ತೆಯಲ್ಲಿ ಅಡ್ಡಬಂದ ಬೀಡಾಡಿ ದನಗಳನ್ನು ತಪ್ಪಿಸಲು ಹೋಗಿ ರಸ್ತೆಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದು ಮಗುಚಿಬಿದ್ದು ಕಾರಲ್ಲಿದ್ದ ಮೂರು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮಗುವಿನ ತಂದೆ, ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಾಲ್ಲೂಕಿನ ಶಿರಸಿ ರಸ್ತೆಯಲ್ಲಿ ಜಂಬೆಸಾಲ್ ಮತ್ತು ಮಳಲಗಾಂವ್ ನಡುವೆ ಶುಕ್ರವಾರ ಈ ಅಪಘಾತ ಸಂಭವಿಸಿದ್ದು ಪಟ್ಟಣದ ಅಡಿಕೆ ವ್ಯಾಪಾರಿ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ ಇವರ ಮೊಮ್ಮಗ ಸುಯೋಗ ಸಾಗರ ಹೆಗಡೆ (3) ಮೃತ ಬಾಲಕ.
ಕಾರು ಚಲಾಯಿಸುತ್ತಿದ್ದ ಮಗುವಿನ ತಂದೆ ಸಾಗರ ಮಹಾಬಲೇಶ್ವರ ಹೆಗಡೆ ಹಾಗೂ ತಾಯಿ ನವ್ಯಾ ಹೆಗಡೆ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಯಲ್ಲಾಪುರದ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತಿವೇಗವಾಗಿ ಕಾರನ್ನು ಚಲಾಯಿಸಿಕೊಂಡು ಹೋಗುವಾಗ ವೇಗವನ್ನು ನಿಯಂತ್ರಿಸಲಾಗದೇ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.