ಬುಧವಾರ, ಅಕ್ಟೋಬರ್ 20, 2021
24 °C

ಶಿರಸಿ: ಕಾರ್ನಾಡ್ ಕಲಿತ ಶಾಲೆಗೆ ₹ 3.12 ಕೋಟಿ ಅನುದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಜ್ಞಾನ ಪೀಠ ಪುರಸ್ಕೃತ ಗಿರೀಶ‌ ಕಾರ್ನಾಡ ಕಲಿತ ನಗರದ ರಾಯಪ್ಪ ಹುಲೇಕಲ್ ಶಾಲೆ ಹಾಗೂ ಮಾರಿಕಾಂಬಾ ಪ್ರೌಢಶಾಲೆ ಅಭಿವೃದ್ಧಿಗೆ ₹3.12 ಕೋಟಿ ಬಿಡುಗಡೆಯಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

‘ಜ್ಞಾನ ಪೀಠ ಪುರಸ್ಕೃತರು‌ ಕಲಿತ ಶತಮಾನ ಪೂರೈಸಿದ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಯೋಜನೆ ರೂಪಿಸಿದೆ. 20220–21ನೆ ಸಾಲಿನ ಬಜೆಟ್‍ನಲ್ಲಿ ಘೋಷಣೆಯಾದಂತೆ ಅನುದಾನ ಬಿಡುಗಡೆಯಾಗಿದೆ’ ಎಂದು ತಿಳಿಸಿದ್ದಾರೆ.

‘ರಾಯಪ್ಪ ಹುಲೇಕಲ್ ಶಾಲೆಗೆ ₹91.25 ಲಕ್ಷ, ಮಾರಿಕಾಂಬಾ ಸರಕಾರಿ ಪ್ರೌಢಶಾಲೆಗೆ ₹221.09 ಲಕ್ಷ ಮಂಜೂರು ಮಾಡಲಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.