ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲು ಆಗ್ರಹ

Last Updated 16 ಫೆಬ್ರುವರಿ 2019, 7:08 IST
ಅಕ್ಷರ ಗಾತ್ರ

ಕಾರವಾರ:ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ, ಸೇವಾ ನಿರತ ಪದವೀಧರ ಶಿಕ್ಷಕರಿಗೆ ಬಡ್ತಿ ನೀಡುವುದು, ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಗರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಡಿಡಿಪಿಐ ಕಚೇರಿಯಿಂದ ಹೊರಟ ಮೆರವಣಿಗೆಯು ನಗರದ ಮುಖ್ಯರಸ್ತೆಗಳಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.

ಮುಖ್ಯ ಶಿಕ್ಷಕರಿಗೆ ವೇತನ ಬಡ್ತಿ ನೀಡುವುದು, ಗ್ರಾಮೀಣ ಕೃಪಾಂಕ ಸೌಲಭ್ಯ ಪಡೆದು ಸೇವೆಯಿಂದ ವಜಾ ಆಗಿರುವ ಶಿಕ್ಷಕರ ಸೇವೆಯನ್ನು ಪರಿಗಣಿಸಿ ಎಲ್ಲ ಸೌಲಭ್ಯ ನೀಡಬೇಕು, ಶಿಕ್ಷಕರನ್ನು ಶಿಕ್ಷಣೇತರ ಕಾರ್ಯಗಳಿಂದ ಮುಕ್ತಗೊಳಿಸಬೇಕು ಎಂದು ಇದೇವೇಳೆ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT