ಬುಧವಾರ, ನವೆಂಬರ್ 30, 2022
17 °C

ಕುಮಟಾ ಬಳಿ ಅಪರೂಪದ ಬಿಳಿ ಹೆಬ್ಬಾವು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ/ ಕುಮಟಾ: ಅಪರೂಪದ ಬಿಳಿ ಹೆಬ್ಬಾವೊಂದು, ತಾಲ್ಲೂಕಿನ ಮಿರ್ಜಾನ್ ಬಳಿಯ ರಾಮನಗರದಲ್ಲಿ ಮನೆಯೊಂದ ಬಳಿ ಸೋಮವಾರ ಕಂಡುಬಂದಿದೆ. ಅದನ್ನು ಉರಗ ತಜ್ಞರು ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

ಸುಬ್ರಹ್ಮಣ್ಯ ನಾಯ್ಕ ಅವರ ಮನೆಯ ಬಳಿ ಇದ್ದ ಹಾವನ್ನು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ  ಸ್ಥಳೀಯರು ಗೊಂದಲಕ್ಕೀಡಾದರು. ವಿಷಯ ತಿಳಿದ ಉರಗ ತಜ್ಞ ಪವನ್ ಎಂ.ನಾಯ್ಕ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಬಿಳಿ ಹೆಬ್ಬಾವು ಎಂದು ಖಾತ್ರಿಪಡಿಸಿದರು.

ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್‌ನ ಕೊರತೆಯಿಂದ ಹಾವುಗಳ ಬಣ್ಣ ಬಿಳಿಯಾಗುತ್ತದೆ. ಇಂಥ ಹಾವುಗಳನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ. ಆದರೆ, ಅಲ್ಬಿನೋ ಹಾವುಗಳಾದರೆ ಕಣ್ಣು ಸಹ ಕೆಂಪು ಮಿಶ್ರಿತ ಬಿಳಿ ಬಣ್ಣ ಇರುತ್ತದೆ. ಇದರ ಕಣ್ಣು ಅರ್ಧ ಮಾತ್ರ ಬಿಳಿ ಇದ್ದು ಇನ್ನರ್ಧ ಕಪ್ಪಾಗಿದೆ. ಹಾಗಾಗಿ ಆ ಗುಂಪಿಗೆ ಸೇರಿಸಲು ಸಾಧ್ಯವಿಲ್ಲ. ಹಾವನ್ನು ಸುರಕ್ಷಿತ ಪ್ರದೇಶಕ್ಕೆ ಬಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು