ಭಾನುವಾರ, ಸೆಪ್ಟೆಂಬರ್ 20, 2020
23 °C

ಎಸಿಬಿ ದಾಳಿ | ಪಿಡಬ್ಲ್ಯುಡಿ ಎಇಇ ಕಚೇರಿಯಲ್ಲಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜೊಯಿಡಾ: ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಉದಯ ಛಬ್ಬಿ ಅವರ ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿದರು. ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. 

ಅವರು ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಸಿಪಿಐ ವಿಶ್ವನಾಥ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿದರು. ಇದೇರೀತಿ, ದಾಂಡೇಲಿಯಲ್ಲಿರುವ ಅವರ ಸಹೋದರನ ನಿವಾಸದಲ್ಲೂ ದಾಖಲೆಗಳ ಪರಿಶೀಲನೆ ಮಾಡಲಾಗಿದೆ. 

ಜೊಯಿಡಾದಲ್ಲಿ ಇಲಾಖೆಯ ವಸತಿ ಗೃಹವಿದ್ದು, ಅದಕ್ಕೆ ಬೀಗ ಹಾಕಲಾಗಿದೆ. ಅದನ್ನು ಕೂಡ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉದಯ ಅವರು 20 ವರ್ಷಗಳಿಂದ ಜೊಯಿಡಾ, ದಾಂಡೇಲಿ ಮತ್ತು ಹಳಿಯಾಳ ತಾಲ್ಲೂಕುಗಳಲ್ಲಿ ಲೋಕೋಪಯೋಗಿ ಮತ್ತು ಜಿಲ್ಲಾ ಪಂಚಾಯ್ತಿ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೊಯಿಡಾ ಉಪವಿಭಾಗದಲ್ಲಿ 2017ರಿಂದ ಎಇಇ ಆಗಿದ್ದಾರೆ. 

ಎಸಿಬಿ ಅಧಿಕಾರಿಗಳು ಎರಡು ವಾರಗಳ ಅವಧಿಯಲ್ಲಿ ತಾಲ್ಲೂಕಿನಲ್ಲಿ ದಾಳಿ ಮಾಡಿದ ಎರಡನೇ ಪ್ರಕರಣವಿದಾಗಿದೆ. ಈ ಹಿಂದೆ ರಾಮನಗರದ ಕಂದಾಯ ನಿರೀಕ್ಷಕ ಎ.ವಿ.ಪಾಟೀಲ್ ಅವರು ಬಡ ಮಹಿಳೆಯಿಂದ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು