ಶುಕ್ರವಾರ, ಅಕ್ಟೋಬರ್ 7, 2022
25 °C

ಅಪಘಾತ ಪ್ರಕರಣ: ಅಪರಾಧಿಗೆ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲ್ಲಾಪುರ: ಅತಿ ವೇಗ ಹಾಗೂ ನಿರ್ಲಕ್ಷ್ಯವಾಗಿ ಲಾರಿಯನ್ನು ಚಲಾಯಿಸಿ ಬಸ್ಸಿನ ಪ್ರಯಾಣಿಕರೊಬ್ಬರ ಸಾವಿಗೆ ಕಾರಣನಾದ ಲಾರಿ ಚಾಲಕನಿಗೆ ಯಲ್ಲಾಪುರದ ಸಿವಿಲ್ ಹಾಗೂ ಜೆಎಂಎಪ್‌ಸಿ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

2017 ಮಾರ್ಚ್‌ 2ರಂದು ಅಪಘಾತ ನಡೆದಿತ್ತು. ರಮ್ಜಾನಸಾಬ ದಸ್ತಗಿರಿಸಾಬ ಸೈಯದ್ ಖಾನ್‌ ಚಲಾಯಿಸುತ್ತಿದ್ದ ಬಸ್‌  ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸದಾಶಿವ ಖೋತ ಮೃತಪಟ್ಟಿದ್ದರು. ನಾಮದೇವ ಸೋಗಲೆ ಹಾಗೂ ಪಾಂಡುರಂಗ ಕಳಕರ ಎಂಬುವರು ಗಾಯಗೊಂಡಿದ್ದರು. ಅಂದಿನ ಪಿಐ ವಿಜಯ್ ಬಿರಾದಾರ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಝೀನತ್ ಬಾನು ಇಬ್ರಾಹಿಂಸಾಬ್ ಶೇಖ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ವಾದ– ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ್ ಶಿಕ್ಷೆ ಪ್ರಕಟಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು