ಮಂಗಳವಾರ, ಜೂನ್ 15, 2021
21 °C

ಧಾರ್ಮಿಕ ಭಾವನೆ ಕದಡುವ ಸಂದೇಶ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ, ಸಾಮಾಜಿಕ ಶಾಂತಿ ಕದಡುವ ಸಂದೇಶ ಹಾಕಿರುವ ಆರೋಪದ ಮೇಲೆ ಭಟ್ಕಳ ಸರ್ಪನಕಟ್ಟಾದ ವೆಂಕಟೇಶ ನಾಯ್ಕ ಎಂಬಾತನನ್ನು ಇಲ್ಲಿನ ಮಾರುಕಟ್ಟೆ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

‘ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ನಿಂದನೆ ಮಾಡಿದ್ದ ಆರೋಪದಡಿ ಇಲ್ಲಿನ ಮಾರುಕಟ್ಟೆ ಠಾಣೆಯಲ್ಲಿ ಇತ್ತೀಚೆಗೆ ಪ್ರಕರಣ ದಾಖಲಾಗಿತ್ತು’ ಎಂದು ಮಾರುಕಟ್ಟೆ ಪಿಎಸ್‌ಐ ನಾಗಪ್ಪ ತಿಳಿಸಿದ್ದಾರೆ. ‘ಕೋಮು ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆ, ವಿಡಿಯೊಗಳನ್ನು ಪೋಸ್ಟ್ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.