ಬುಡಕಟ್ಟು ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

7

ಬುಡಕಟ್ಟು ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

Published:
Updated:

ಕಾರವಾರ: ರಾಜ್ಯದಲ್ಲಿ ಬುಡಕಟ್ಟು ಸಮುದಾಯಗಳ ಅಭಿವೃದ್ಧಿ ಸಲುವಾಗಿ ಪ್ರತ್ಯೇಕ ನಿಗಮ ಆರಂಭಿಸಬೇಕು ಮತ್ತು ಪ್ರತಿ ಜಿಲ್ಲೆಯಲ್ಲೂ ನಿಗಮದ ಕಚೇರಿ ಆರಂಭಿಸಿ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತಿನ ಉಪಾಧ್ಯಕ್ಷ ದಿಯೋಗ ಬ ಸಿದ್ದಿ ಒತ್ತಾಯಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ ಅವರು, ‘2006ರ ಕಾಯ್ದೆಯ ಪ್ರಕಾರ ಪ್ರತಿ ಬುಡಕಟ್ಟು ಫಲಾನುಭವಿಗೆ ನಾಲ್ಕು ಎಕರೆ ಜಮೀನು ನೀಡಬೇಕು. ಅವುಗಳಿಗೆ ಸಾಮೂಹಿಕ ಹಕ್ಕುಪತ್ರ ವಿತರಣೆ ಮಾಡಬೇಕು. ಉದ್ಯೋಗದಲ್ಲಿ ಬುಡಕಟ್ಟು ಸಮುದಾಯಗಳ ಯುವಕ– ಯುವತಿಯರಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕು. ಉತ್ತರ ಕನ್ನಡ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆ ಎಂದು ಘೋಷಣೆ ಮಾಡಬೇಕು’ ಎಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಸಿದ್ದಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದೂ ಅವರು ಮನವಿ ಮಾಡಿದ್ದಾರೆ.

ಆದಿವಾಸಿ ದಿನಾಚರಣೆ 24ರಂದು: ಬೆಂಗಳೂರಿನ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಇದೇ 9ರಂದು ಈ ಬಾರಿಯ ವಿಶ್ವ ಆದಿವಾಸಿ ದಿನಾಚರಣೆಯನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !