ಮಂಗಳವಾರ, ಫೆಬ್ರವರಿ 18, 2020
28 °C

ಸಾಹಸಿ ಯುವಕನಿಗೆ ಪ್ರಶಂಸಾ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಮುರೇಗಾರ ಜಲಪಾತದ ನೀರಿನಲ್ಲಿ ಸಿಲುಕಿ ಅಪಾಯದಲ್ಲಿದ್ದ ಮೂವರನ್ನು ರಕ್ಷಿಸಿದ್ದ ಹುಬ್ಬಳ್ಳಿಯ ಆದಿತ್ಯ ಮಲ್ಲಿಕಾರ್ಜುನ ಶಿವಳ್ಳಿ ಅವರಿಗೆ ಪೊಲೀಸ್ ಇಲಾಖೆ ಶುಕ್ರವಾರ ಪ್ರಶಂಸಾ ಪತ್ರ ನೀಡಿ ಗೌರವಿಸಿದೆ.

ಸಂಕ್ರಾಂತಿಯಂದು ತಾಲ್ಲೂಕಿನ ಮುರೇಗಾರ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ ಹುಬ್ಬಳ್ಳಿಯ ಇಂದುಧರ ಮುತ್ತಳ್ಳಿ, ಅಕ್ಷರ ಮುತ್ತಳ್ಳಿ ಹಾಗೂ ಬಳ್ಳಾರಿಯ ಬಸಪ್ಪ ಕೊಡಬಾಳ ಅವರು ಈಜಲು ಇಳಿದಾಗ ತೀವ್ರ ಅಪಾಯದಲ್ಲಿ ಸಿಲುಕಿ, ಸಾವು–ಬದುಕಿನ ನಡುವೆ ಹೋರಾಡುತ್ತಿದ್ದರು. ಇದನ್ನು ಗಮನಿಸಿದ ಯುವಕ ಆದಿತ್ಯ, ಈ ಮೂವರನ್ನು ನೀರಿನ ಸೆಳೆತದಿಂದ ಹೊರ ತಂದು ಅವರ ಜೀವ ಉಳಿಸಿದ್ದಾರೆ.

ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಯುವಕನ ಸಾಹಸವನ್ನು ಮೆಚ್ಚಿದ್ದಾರೆ. ಅವರ ಸೂಚನೆಯಂತೆ ಗ್ರಾಮೀಣ ಠಾಣೆ ಪಿಎಸ್‌ಐ ನಂಜಾ ನಾಯ್ಕ, ಆದಿತ್ಯ ಅವರಿಗೆ ಪ್ರಶಂಸಾ ಪತ್ರ ನೀಡಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು