ಶನಿವಾರ, ಸೆಪ್ಟೆಂಬರ್ 25, 2021
28 °C

ದ್ವಿತೀಯ ಪಿ.ಯು: 14,665 ವಿದ್ಯಾರ್ಥಿಗಳು ಉತ್ತೀರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಕೋವಿಡ್ ಕಾರಣದಿಂದ ಬದಲಾದ ಪದ್ಧತಿಯಲ್ಲಿ ದ್ವಿತೀಯ ಪಿ.ಯು ಪರೀಕ್ಷಾ ಫಲಿತಾಂಶವನ್ನು ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದೆ. ದ್ವಿತೀಯ ಪಿ.ಯು ತರಗತಿಯಲ್ಲಿದ್ದ ಎಲ್ಲರನ್ನೂ ಉತ್ತೀರ್ಣ ಎಂದು ಪರಿಗಣಿಸಲಾಗಿದೆ.

ಉತ್ತರ ಕನ್ನಡದಲ್ಲಿ ಒಟ್ಟು 14,665 ವಿದ್ಯಾರ್ಥಿಗಳು ದ್ವಿತೀಯ ಪಿ.ಯು ಅಧ್ಯಯನ ಮಾಡುತ್ತಿದ್ದರು. ಅವರಲ್ಲಿ 13,467 ಮಂದಿ ಮೊದಲ ಬಾರಿ ಪರೀಕ್ಷೆ ಬರೆಯಲು ನೋಂದಣಿಯಾಗಿದ್ದರು. ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ 11,003, ಗ್ರಾಮೀಣ ಭಾಗದಲ್ಲಿ 3,462 ವಿದ್ಯಾರ್ಥಿಗಳು ಈ ಬಾರಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 3,838, ವಾಣಿಜ್ಯ ವಿಭಾಗದಲ್ಲಿ 6,626 ಹಾಗೂ ವಿಜ್ಞಾನ ವಿಭಾಗದಲ್ಲಿ 4,001 ವಿದ್ಯಾರ್ಥಿಗಳಿದ್ದರು.

600ಕ್ಕೆ 600 ಅಂಕಗಳನ್ನು ಪಡೆದವರು, ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರು, ‍ವಿವಿಧ ದರ್ಜೆಗಳಲ್ಲಿ ಉತ್ತೀರ್ಣರಾದವರು ಹಾಗೂ ಕನಿಷ್ಠ ಉತ್ತೀರ್ಣದ ಅಂಕಗಳನ್ನು ಪಡೆದವರು ಎಷ್ಟು ವಿದ್ಯಾರ್ಥಿಗಳು ಎಂಬ ಬಗ್ಗೆ ತಿಳಿದು ಬರಬೇಕಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎನ್.ಬಗಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು