ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪ: ಪ್ರಾಧ್ಯಾಪಕನ ವಿರುದ್ಧ ದೂರು

ಅಂಕೋಲಾ: ಕೋವಿಡ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಕಾಲೇಜಿಗೆ ಹಾಜರಾಗಿ ವಿದ್ಯಾರ್ಥಿಗಳಲ್ಲಿ ಕೋವಿಡ್ ಹರಡಲು ಕಾರಣವಾದ ಆರೋಪದ ಮೇಲೆ ಪಟ್ಟಣದ ಜಿ.ಸಿ ಕಾಲೇಜು ಪ್ರಾಧ್ಯಾಪಕರೊಬ್ಬರ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಿ.ಸಿ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎಸ್.ಆರ್. ಶಿರೋಡ್ಕರ್ ಅವರ ವಿರುದ್ಧ ಶನಿವಾರ ದೂರು ದಾಖಲಾಗಿದೆ. ಪುರಸಭೆಯ ಮುಖ್ಯಾಧಿಕಾರಿ ಶ್ರುತಿ ಗಾಯಕವಾಡ ದೂರು ನೀಡಿದ್ದಾರೆ.
ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದರೂ 14 ದಿನ ಕಾರೈಂಟೈನ್ ನಿಯಮ ಪಾಲಿಸದೇ ಕಾಲೇಜಿಗೆ ಬಂದಿದ್ದಾರೆ. ಸೋಂಕು ಹರಡುವಿಕೆ ಬಗ್ಗೆ ತಿಳಿದಿದ್ದರೂ ನಿರ್ಲಕ್ಷ್ಯದಿಂದ ಉದ್ದೇಶಪೂರ್ವಕವಾಗಿ ಈ ಪ್ರಾಧ್ಯಾಪಕರು ಜ. 19ರಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ಇದು 13 ವಿದ್ಯಾರ್ಥಿಗಳಿಗೆ ಸೋಂಕು ಹರಡಲು ಕಾರಣವಾಗಿದೆ ಎಂದು ದೂರಿನಲ್ಲಿ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.