ಭಾನುವಾರ, ಸೆಪ್ಟೆಂಬರ್ 25, 2022
29 °C

ಅನಿಲ್ ಮಡಿವಾಳಗೆ ‘ವರ್ಲ್ಡ್ ಜೀನಿಯಸ್ ರೆಕಾರ್ಡ್’ ಗೌರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ನಗರದ ನಿವೃತ್ತ ಚಿತ್ರಕಲಾ ಶಿಕ್ಷಕ ಅನಿಲ್ ಸುಬ್ರಾಯ ಮಡಿವಾಳ, ‘ವರ್ಲ್ಡ್ ಜೀನಿಯಸ್ ರೆಕಾರ್ಡ್’ ಸಂಸ್ಥೆಯ ಗೌರವಕ್ಕೆ ಭಾಜನರಾಗಿದ್ದಾರೆ. ಸಂಸ್ಥೆಯು ಪ್ರಮಾಣಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದೆ. 

ಇದು ನೈಜೀರಿಯಾ ದೇಶದ ಸಂಸ್ಥೆಯಾಗಿದ್ದು, ಭಾರತ ಘಟಕದಿಂದ ಗೌರವ ಪ್ರದಾನ ಮಾಡಲಾಗಿದೆ. ನಗರದ ಸೇಂಟ್ ಜೋಸೆಫ್ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿದ್ದ ಅವರು, ಸುಮಾರು 36 ವರ್ಷ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ ಎನ್.ಸಿ.ಸಿ ನೌಕಾ ಘಟಕದ ಅಧಿಕಾರಿಯಾಗಿಯೂ 27 ವರ್ಷ ಜವಾಬ್ದಾರಿ ನಿರ್ವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು