ಮಂಗಳವಾರ, ಜೂನ್ 22, 2021
22 °C

ಜೂನ್ 1ರಿಂದ ವಾರ್ಷಿಕ ಮೀನುಗಾರಿಕೆ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಯಾಂತ್ರೀಕೃತ ಮೀನು ಗಾರಿಕೆ ದೋಣಿಗಳ ಮೂಲಕ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ, ಒಟ್ಟು 61 ದಿನ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಪಿ.ನಾಗರಾಜ ತಿಳಿಸಿದ್ದಾರೆ.

ಈ ಅವಧಿಯಲ್ಲಿ ಕೇವಲ ದೋಣಿಗಳ ಚಲನವಲನಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ, ನಾಡದೋಣಿಗಳಿಗೆ ಅವಕಾಶವಿದೆ. ಅವುಗಳ ಮೂಲಕ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಲು ಅನುಮತಿ ಇದೆ ಎಂದು ಅವರು ಹೇಳಿದ್ದಾರೆ.

ಇದನ್ನು ಉಲ್ಲಂಘಿಸಿದರೆ ಕರ್ನಾಟಕ ಕಡಲ ಮೀನು ಗಾರಿಕೆ (ನಿಯಂತ್ರಣ) ಕಾಯ್ದೆ 1986ರ ಅಡಿ ಕಾನುನು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಮತ್ತು ಕೇಂದ್ರ ಅಬಕಾರಿ ತೆರಿಗೆ ಮರು ಪಾವತಿಯನ್ನು ಪಡೆಯಲು ಅನರ್ಹರಾಗಿತ್ತಾರೆ ಎಂದು ಎಚ್ಚರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು