ಬುಧವಾರ, ಜೂನ್ 29, 2022
24 °C
ಅನುಬಂಧ ಚಾರಿಟೆಬಲ್ ಟ್ರಸ್ಟ್ ಉದ್ಘಾಟನೆ

ಸಂಸ್ಕಾರಯುತ ಸಮಾಜ ಸಾಮೂಹಿಕ ಜವಾಬ್ದಾರಿ: ವಿಶ್ವೇಶ್ವರ ಹೆಗಡೆ ಕಾಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಸಂಸ್ಕಾರಯುತ ಸಮಾಜ ನಿರ್ಮಿಸಲು ಪ್ರತಿಯೊಬ್ಬರ ಜವಾಬ್ದಾರಿಯೂ ಮಹತ್ತವಾಗಿದೆ. ಈ ನಿಟ್ಟಿನಲ್ಲಿ ಜನರನ್ನು ಒಗ್ಗೂಡಿಸುವ ಕೆಲಸವನ್ನು ಸಂಘ–ಸಂಸ್ಥೆಗಳು ಮಾಡಬೇಕು ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆ ನೀಡಿದರು.

ಇಲ್ಲಿನ ರುದ್ರದೇವರ ಮಠದ ಸಭಾಭವನದಲ್ಲಿ ಮಂಗಳವಾರ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅನುಬಂಧ ಚಾರಿಟೆಬಲ್ ಟ್ರಸ್ಟ್ ಉದ್ಘಾಟಿಸಿ ಮಾತನಾಡಿದ ಅವರು, ‘ಸವಾಲುಗಳಿಂದ ಕೂಡಿರುವ ಹಳ್ಳಿ ಜನರ ಜೀವನ ಕ್ರಮ ಸುಧಾರಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕೆಲಸವನ್ನು ಮಾಡಬೇಕು’ ಎಂದರು.

ಎಂ.ಇ.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ ಮಾತನಾಡಿ, ‘ಅನುಬಂಧ ಟ್ರಸ್ಟ್ ಹೆಸರಿಗೆ ತಕ್ಕಂತೆ ಸಮಾಜದ ಎಲ್ಲ ಸ್ತರದ ಜನರೊಟ್ಟಿಗೆ ಬೆರೆತು ಪರಿಣಾಮಕಾರಿ ಬದಲಾವಣೆ ತರಲು ನಾಂದಿ ಹಾಡಲಿ’ ಎಂದರು.

ಬನವಾಸಿ ಹೊಳೆಮಠದ ನಾಗಭೂಷಣ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಚಿಂತಕ ಕೆ.ಎನ್.ಹೊಸ್ಮನಿ ‘ಸಾಮಾಜಿಕ ಸೇವೆಗಳು–ಕಾರ್ಯಕರ್ತರು’ ವಿಷಯದ ಕುರಿತು ಉಪನ್ಯಾಸ ನೀಡಿದರು. ಅದ್ಯಕ್ಷತೆ ವಹಿಸಿದ್ದ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಪಾಟೀಲ ಟ್ರಸ್ಟ್ ಧ್ಯೆಯೋದ್ದೇಶ ವಿವರಿಸಿದರು.

ಸಾಮಾಜಿಕ ಕಾರ್ಯಕರ್ತರಾದ ಮೋಹಿನಿ ಬೈಲೂರು, ಪ್ರದೀಪ ಎಲ್ಲನಕರ ಅವರನ್ನು ಸನ್ಮಾನಿಸಲಾಯಿತು. ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಸದಸ್ಯೆ ನಾಗರತ್ನ ಜೋಗಳೇಕರ, ಬದನಗೋಡ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೀತಾ ಆಲೂರ ಇದ್ದರು.

ಟ್ರಸ್ಟ್ ಉಪಾಧ್ಯಕ್ಷ ಅರವಿಂದ ತೆಲಗುಂದ ಸ್ವಾಗತಿಸಿದರು. ರಾಜೇಶ ಶೆಟ್ಟಿ ನಿರ್ವಹಿಸಿದರು.‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು