ಸೋಮವಾರ, ಅಕ್ಟೋಬರ್ 18, 2021
23 °C

‘ಸ್ವಾವಲಂಬಿ ಬದುಕಿಗೆ ಕೌಶಲ ರಹದಾರಿ’; ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಮೇಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ‘ಕೌಶಲವು ಯಾರೊಬ್ಬನ ಸ್ವತ್ತು ಅಲ್ಲ. ಅದು ಸ್ವಾವಲಂಬಿ ಬದುಕಿಗೆ ರಹದಾರಿಯಾಗಿದೆ’ ಎಂದು ನಗರಸಭೆ ಅಧ್ಯಕ್ಷ ಡಾ.ನಿತಿನ್ ಪಿಕಳೆ ಹೇಳಿದರು.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೋಮವಾರ ಬಿಣಗಾದ ಸೋಮನಾಥ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ, ಜಿಲ್ಲಾಮಟ್ಟದ ‘ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಈ ಮೇಳವು ಹಲವು ವಿದ್ಯಾರ್ಥಿಗಳ ಬದುಕಿನಲ್ಲಿ ದಾರಿದೀಪವಾಗಲಿದೆ. ಭಾಗವಹಿಸಿರುವ ವಿದ್ಯಾರ್ಥಿಗಳು ಶಿಸ್ತು ಹಾಗೂ ಸೇರಿಕೊಳ್ಳುವ ಕಂಪನಿಯೊಂದಿಗೆ ಪ್ರಾಮಾಣಿಕತೆಯಿಂದ ಇದ್ದರೆ ಭವಿಷ್ಯ ಉತ್ತಮವಾಗಿರುತ್ತದೆ’ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ನೋಡಲ್ ಅಧಿಕಾರಿ ರವೀಂದ್ರನಾಥ್ ಸಿಗ್ಗಾಂವ್ಕರ್ ಮಾತನಾಡಿ, ‘ಈಗಾಗಲೇ ಉದ್ಯೋಗ ಇಲಾಖೆ ಅಧಿಕಾರಿಗಳಿಂದ 61 ಕಂಪನಿಗಳನ್ನು ಗುರುತಿಸಲಾಗಿದೆ. 15ಕ್ಕಿಂತ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಿವೆ. ವಿವಿಧ ತಾಲ್ಲೂಕುಗಳಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ’ ಎಂದು ತಿಳಿಸಿದರು.

ಸೋಮನಾಥ್ ಕೈಗಾರಿಕಾ ತರಬೇತಿ ಸಂಸ್ಥೆಯ ಸಂಸ್ಥಾಪಕ ಪಿ.ಎಂ.ತಾಂಡೇಲ್, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಡಿ.ಟಿ.ನಾಯ್ಕ, ಸೋಮನಾಥ ಕೌಶಲಾಭಿವೃದ್ಧಿ ಸಂಸ್ಥೆಯ ಪ್ರಾಚಾರ್ಯ ಕಿಶೋರ್ ರಾಣೆ, ಬೆಂಗಳೂರಿನ ಇಂಡಿಯನ್ ಟೆಲಿಕಾಂ ಇಂಡಸ್ಟ್ರಿಯ ಅಧಿಕಾರಿ ಗಿರೀಶ್, ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಅಧಿಕಾರಿ ವಿಕ್ರಮ್ ಲೋಖಂಡೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು