ಶ್ರೀನಾಥ ಜೋಶಿಗೆ `ಟ್ಯಾಗೋರ್ ಪತ್ರಿಕಾ ಪ್ರಶಸ್ತಿ'

7

ಶ್ರೀನಾಥ ಜೋಶಿಗೆ `ಟ್ಯಾಗೋರ್ ಪತ್ರಿಕಾ ಪ್ರಶಸ್ತಿ'

Published:
Updated:
ಶ್ರೀನಾಥ್ ಜೋಶಿ

ಕಾರವಾರ: ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ `ಟ್ಯಾಗೋರ್ ಪತ್ರಿಕಾ ಪ್ರಶಸ್ತಿ'ಗೆ ಪತ್ರಕರ್ತ ಶ್ರೀನಾಥ ಜೋಶಿ ಅವರು ಆಯ್ಕೆಯಾಗಿದ್ದಾರೆ. 

ಸಂಘದ ಅಧ್ಯಕ್ಷ ಟಿ.ಬಿ.ಹರಿಕಾಂತ ಅವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಪತ್ರಿಕಾ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಜತೆಗೆ, ಸಂಘದ ಸದಸ್ಯರಿಗೆ ಪ್ರದಾನ ಮಾಡುವ `ಜೀವಮಾನ ಸಾಧನೆ ಪ್ರಶಸ್ತಿ'ಗೆ ಪತ್ರಕರ್ತ ವಸಂತಕುಮಾರ್ ಕತಗಾಲ ಹಾಗೂ ಹಿರಿಯ ಛಾಯಾಗ್ರಾಹಕ ಪಾಂಡುರಂಗ ಹರಿಕಂತ್ರ ಅವರನ್ನು ಆಯ್ಕೆ ಮಾಡಲಾಗಿದೆ.

ಅವರಿಗೆ ಜುಲೈ ಒಂದರಂದು ಜಿಲ್ಲಾ ಪತ್ರಿಕಾಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !