ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ಅಂಗಾಂಗದಾನ ಜಾಗೃತಿಗೆ ಚಾಲನೆ

Last Updated 21 ಜನವರಿ 2022, 16:43 IST
ಅಕ್ಷರ ಗಾತ್ರ

ಶಿರಸಿ: ಪರೋಪಕಾರ ತತ್ವ ಬೆಳೆಸಿಕೊಂಡು ಸಮಾಜದಲ್ಲಿ ಒಳ್ಳೆಯ ಕೆಲಸಕ್ಕೆ ನೆರವಾಗುವ ಗುಣ ಪ್ರತಿಯೊಬ್ಬರಲ್ಲೂ ಬೆಳೆಯಬೇಕಿದೆ ಎಂದು ರುದ್ರದೇವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಇಲ್ಲಿನ ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಸೇವಾ ಸಮಿತಿ ಹಮ್ಮಿಕೊಂಡಿರುವ ಅಂಗಾಂಗ ದಾನಗಳ ಕುರಿತು ಜನಜಾಗೃತಿ ಮೂಡಿಸುವ ಅಭಿಯಾನಕ್ಕೆ ಶುಕ್ರವಾರ ಮಠದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ‘ಅನ್ನ, ಅಕ್ಷರ ದಾಸೋಹದಿಂದ ಲಕ್ಷಾಂತರ ಸತ್ಪ್ರಜೆಗಳನ್ನು ಶಿವಕುಮಾರ ಸ್ವಾಮೀಜಿ ರೂಪಿಸಿದರು. ಅವರು ತೋರಿದ ಮಾರ್ಗದಲ್ಲಿ ಸಾಗುವ ಕೆಲಸ ಮಾಡಬೇಕು’ ಎಂದರು.

ವಾಯುವ್ಯ ಸಾರಿಗೆ ಸಂಸ್ಥೆಯ ಬಸ್‍ಗೆ ಜಾಗೃತಿ ಮೂಡಿಸುವ ಸಂದೇಶಗಳಿರುವ ಸ್ಟಿಕ್ಕರ್ ಅಂಟಿಸಲಾಯಿತು. ಶಿರಸಿ ಸಾರಿಗೆ ಘಟಕದ ವ್ಯವಸ್ಥಾಪಕ ಆರ್.ಸರ್ವೇಶ್, ಸೇವಾ ಸಮಿತಿಯ ವಿ.ಎಂ.ಪ್ರವೀಣ್, ಜ್ಯೋತಿ ಪಾಟೀಲ, ಕೃಷ್ಣ ಪದಕಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT