ಭಾನುವಾರ, ಅಕ್ಟೋಬರ್ 2, 2022
18 °C

ಹಕ್ಕಿನೊಂದಿಗೆ ಕರ್ತವ್ಯ ನೆನಪಿನಲ್ಲಿರುವುದು ಮುಖ್ಯ: ಸಚಿವ ಶ್ರೀನಿವಾಸ‌ ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ದೇಶದ 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ‌ ಪೂಜಾರಿ, ನಗರದಲ್ಲಿ ಸೋಮವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ವಿವಿಧ 15 ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. 

ಬಳಿಕ ಮಾತನಾಡಿದ ಅವರು, 'ಭಾರತದ ಪ್ರತಿಯೊಬ್ಬನೂ ಭಾರತೀಯ ಪ್ರಜೆ. ಈ ದೇಶದಲ್ಲಿ ಸರ್ವರಲ್ಲಿ ಒಂದಾಗಿ ಬದುಕುವ ಹಕ್ಕಿದೆ. ಕೆಲವು ಕರ್ತವ್ಯಗಳೂ ಅವನ ಜವಾಬ್ದಾರಿ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು' ಎಂದು ಹೇಳಿದರು. ‌

ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಇದೇವೇಳೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸಚಿವರು ಸನ್ಮಾನಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು