ಸೋಮವಾರ, ಮೇ 23, 2022
30 °C

ಬನವಾಸಿ ರಥೋತ್ಸವ: ಹಿಂದೂಯೇತರ ವ್ಯಾಪಾರಿಗಳಿಗೆ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ತಾಲ್ಲೂಕಿನ ಬನವಾಸಿಯ ಉಮಾಮಧುಕೇಶ್ವರ ದೇವರ ರಥೋತ್ಸವ ಏ.11, 12 ರಂದು ನಡೆಯಲಿದ್ದು ದೇವಸ್ಥಾನದ ಸಮೀಪದ ಕಟ್ಟಡ ಅಥವಾ ನಿವೇಶನಗಳಲ್ಲಿ ಹಿಂದೂಯೇತರರಿಗೆ ಮಳಿಗೆ ಗುತ್ತಿಗೆ ಅಥವಾ ಬಾಡಿಗೆ ನೀಡದಿರಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ.

‘ದೇವಸ್ಥಾನದ ಸಮೀಪದ ಜಮೀನು ಕಟ್ಟಡ ಅಥವಾ ನಿವೇಶನಗಳು ಸೇರಿದಂತೆ ಯಾವುದೇ ಸ್ವತ್ತನ್ನು ಹಿಂದೂಗಳಲ್ಲದವರಿಗೆ ಗುತ್ತಿಗೆಗೆ ನೀಡತಕ್ಕದ್ದಲ್ಲ’ ಎಂಬ ಬ್ಯಾನರ್ ದೇವಸ್ಥಾನದ ಆವರಣದಲ್ಲಿ ಅಳವಡಿಸಲಾಗಿದೆ.

ರಥೋತ್ಸವದ ಸಂದರ್ಭದಲ್ಲಿ ನೂರಾರು ಮಳಿಗೆಗಳನ್ನು ತೆರೆಯಲಾಗುತ್ತದೆ. ಆದರೆ, ಈ ಬಾರಿ ಹಿಂದೂ ಧರ್ಮೀಯರಿಗೆ ಮಾತ್ರ ಅವಕಾಶ ನೀಡುವುದಾಗಿ ಸಮಿತಿ ತಿಳಿಸಿದೆ.

‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ನಿಯಮದ ಅನ್ವಯ ಹಿಂದೂಯೇತರರಿಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಹಿಂದೂಗಳಲ್ಲದವರಿಗೆ ರಥೋತ್ಸವದ ವೇಳೆ ಮಳಿಗೆ ತೆರೆಯಲು ಅವಕಾಶ ನೀಡದಿರಲು ನಿರ್ಣಯಿಸಿದ್ದೇವೆ’ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಜಶೇಖರ ಒಡೆಯರ್ ಪ್ರತಿಕ್ರಿಯಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು