ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಪುಗೌಡ ಕಾಂಗ್ರೆಸ್‌ ಸೇರ್ಪಡೆ 22ಕ್ಕೆ

‘ನಿರ್ಧಾರ ಬದಲಿಸುವ ಪ್ರಶ್ನೆಯಿಲ್ಲ’
Last Updated 19 ನವೆಂಬರ್ 2019, 15:36 IST
ಅಕ್ಷರ ಗಾತ್ರ

ಮುಂಡಗೋಡ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ ಪುತ್ರ ಬಾಪುಗೌಡ ಪಾಟೀಲ ಅವರು ನ.22ರಂದು ಶಾಸಕ ಆರ್.ವಿ.ದೇಶಪಾಂಡೆ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುವುದಾಗಿ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.

‘ನನ್ನ ಬೆಂಬಲಿಗರ ಸಂಖ್ಯೆ ಎಷ್ಟು ಎಂಬುದನ್ನು ಕಾದುನೋಡಿ. ಡಿ.9ಕ್ಕೆ ಉತ್ತರ ಸಿಗುತ್ತದೆ. ಯಾವುದೇ ಒತ್ತಡ ಬಂದರೂ ನಿರ್ಧಾರ ಬದಲಿಸುವುದಿಲ್ಲ ಎಂದರು. ‘ನಾನು ಕಾಂಗ್ರೆಸ್ ಪಕ್ಷಕ್ಕೆ ತಾನು ಸೇರ್ಪಡೆಯಾಗುವುದರಿಂದ ತಂದೆಗೆ ಮುಜುಗುರ ಆಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈ ಸಲದ ಉಪಚುನಾವಣೆಯಲ್ಲಿ ಅವರು ಯಾವುದೇ ಪಕ್ಷದಿಂದ ಸ್ಪರ್ಧಿಸಿಲ್ಲ. ಇಷ್ಟು ದಿನ ನಾನು ಯಾವುದೇ ಪಕ್ಷದ ಸದಸ್ಯತ್ವ ಪಡೆದಿಲ್ಲ. ಇಲ್ಲಿಯವರೆಗೆ ಸಾಮಾಜಿಕ ಕಾರ್ಯದೊಂದಿಗೆ ಎಲ್ಲ ವರ್ಗದ ಜನರೊಂದಿಗೆ ಗುರುತಿಸಿಕೊಂಡಿದ್ದೇನೆ. ಬಿಜೆಪಿ ಸಹ ಈ ಹಿಂದೆ ಯಾವುದೇ ಹುದ್ದೆಯನ್ನು ನನಗೆ ನೀಡಿಲ್ಲ’ ಎಂದು ಹೇಳಿದರು.

‘ಯಾವುದೇ ಸ್ಥಾನಮಾನದ ನಿರೀಕ್ಷೆ ಇಟ್ಟು ಕಾಂಗ್ರೆಸ್ ಪಕ್ಷಕ್ಕೆ ಬಂದಿಲ್ಲ. ನನ್ನ ಅರ್ಹತೆ, ಯೋಗ್ಯತೆ ಗುರುತಿಸಿ ನೀಡಿದರೆ, ನಂತರ ಅದರ ಬಗ್ಗೆ ಯೋಚಿಸುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಮುಖಂಡರಾದ ಎಚ್.ಎಂ.ನಾಯ್ಕ, ಪಿ.ಜಿ.ತಂಗಚ್ಚನ್, ಧರ್ಮರಾಜ ನಡಗೇರಿ, ರಾಜು ಭೋವಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT