ಶುಕ್ರವಾರ, ಜುಲೈ 23, 2021
23 °C

ಬಂದು ಹೋದವನಿಗೂ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಡಗೋಡ: ಬೆಂಗಳೂರಿನಿಂದ ಬಂದಿದ್ದ 34 ವರ್ಷದ ವ್ಯಕ್ತಿಯೊಬ್ಬರ ಬಗ್ಗೆ ನೆರೆಹೊರೆಯವರು ಮಾಹಿತಿ ನೀಡಿದ್ದರಿಂದ, ಆ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಗೆ ಕಳಿಸಲಾಗಿತ್ತು. ಆದರೆ, ವರದಿ ಬರುವ ಮುನ್ನವೇ, ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡದೆ, ಈ ವ್ಯಕ್ತಿಯು ಬೆಂಗಳೂರಿಗೆ ಮರಳಿದ್ದಾರೆ.

ಶುಕ್ರವಾರ ಸೋಂಕು ದೃಢಪಟ್ಟಿರುವ ಕುರಿತು ಮಾಹಿತಿ ನೀಡಲು ಮುಂದಾದಾಗ, ಸಣ್ಣ ಕೆಲಸ ಇದ್ದಿದ್ದರಿಂದ, ಮುಗಿಸಿಕೊಂಡು ಮರಳಿ ಬೆಂಗಳೂರಿಗೆ ಬಂದು, ತನ್ನ ಕುಟುಂಬದ ಜೊತೆ ಇದ್ದಿದ್ದಾಗಿ ಆ ವ್ಯಕ್ತಿ ಪ್ರತಿಕ್ರಿಯಿಸಿದ್ದಾರೆ. ಇದರಿಂದ ಅಸಮಾಧಾನಗೊಂಡ ತಹಶೀಲ್ದಾರ್ ಶ್ರೀಧರ ಮುಂದಲಮನಿ, ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಕ್ಕೆ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿ, ಆಸ್ಪತ್ರೆಗೆ ದಾಖಲಾಗಲು ಅಗತ್ಯ ಮಾಹಿತಿಯನ್ನು ಕಳುಹಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು