ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಗೋಕರ್ಣ: ಸಮುದ್ರದಲ್ಲಿ ಮುಳುಗಿ ಯುವಕ ನಾಪತ್ತೆ- ಮತ್ತೊಬ್ಬರ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕರ್ಣ: ಇಲ್ಲಿಯ ಮೇನ್ ಬೀಚ್‌ನಲ್ಲಿ ಸೋಮವಾರ ಬೆಳಿಗ್ಗೆ ಈಜಾಡಲು ತೆರಳಿದ ಯುವಕ ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ. ಮತ್ತೊಬ್ಬರನ್ನು ರಕ್ಷಣೆ ಮಾಡಲಾಗಿದೆ.

ನಾಪತ್ತೆಯಾದವರನ್ನು  ಬೆಂಗಳೂರಿನ  ಬಿ.ಟಿ.ಎಂ ಬಡಾವಣೆ ನಿವಾಸಿ ಅರುಣ ಲಕ್ಕಪ್ಪ (22) ಎಂದು ಗುರುತಿಸಲಾಗಿದೆ. ಒಟ್ಟು ಎಂಟು ಯುವಕರು ಗೋಕರ್ಣ ಪ್ರವಾಸಕ್ಕೆ ಬಂದಿದ್ದರು. ಅಲೆಗಳು ಅಪಾಯಕಾರಿಯಾಗಿರುವ ಬಗ್ಗೆ ಎಚ್ಚರಿಕೆ ನೀಡಿದರೂ ನಿರ್ಲಕ್ಷಿಸಿ ಈಜಾಡಲು ನೀರಿಗೆ ಇಳಿದಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. 

ಗೋಕರ್ಣ ಪಿ.ಎಸ್.ಐ ನವೀನ್ ನಾಯ್ಕ  ಸ್ಥಳದಲ್ಲಿದ್ದು, ನಾಪತ್ತೆಯಾದವರಿಗಾಗಿ ಹುಡುಕಾಟ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು