ಶುಕ್ರವಾರ, ಅಕ್ಟೋಬರ್ 7, 2022
25 °C

ರಾಜ್ಯದೆಲ್ಲೆಡೆ ಭಗವದ್ಗೀತಾ ಅಭಿಯಾನ ನ.4 ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ‘14ನೇ ವರ್ಷದ ಭಗವದ್ಗೀತಾ ಅಭಿಯಾನ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನ.4 ರಿಂದ ಆರಂಭಿಸಲಾಗುತ್ತಿದೆ. ಡಿ.4ರಂದು ದಾವಣಗೆರೆಯಲ್ಲಿ ‌ಸಮಾರೋಪಗೊಳ್ಳಲಿದೆ’ ಎಂದು ತಾಲ್ಲೂಕಿನ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ.

‘ಅಭಿಯಾನಕ್ಕೆ ಈ ಬಾರಿ 5ನೇ ಅಧ್ಯಾಯ ಆಯ್ಕೆ ಮಾಡಿಕೊಳ್ಳಲಾಗಿದೆ. ಕೋವಿಡ್ ಕಾರಣದಿಂದ ಕಳೆದ ಎರಡು ವರ್ಷ ಸಾರ್ವಜನಿಕವಾಗಿ ಅಭಿಯಾನ ನಡೆಸಲು ನಡೆಸಲು ಸಾಧ್ಯ ಆಗಿರಲಿಲ್ಲ. ಈ ವರ್ಷ ಸರ್ಕಾರ, ವಿವಿಧ ಸಂಘ–ಸಂಸ್ಥೆಗಳ ಸಹಯೋಗದೊಂದಿಗೆ ಅಭಿಯಾನ ನಡೆಸಲಾಗುವುದು’ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

‘ರಾಜ್ಯದ ಎಲ್ಲ ಕಾರಾಗೃಹದಲ್ಲೂ ಅಭಿಯಾನ ನಡೆಸಲು ಯೋಚಿಸಲಾಗಿದೆ. ಅಭಿಯಾನದಲ್ಲಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಕುರಿತ ವಿವಿಧ ಸ್ಪರ್ಧೆ ರಾಜ್ಯ ಮಟ್ಟದವರೆಗೆ ನಡೆಯಲಿದೆ. ಅಭಿಯಾನ ನಡೆಸಲು ಪ್ರತಿ ಜಿಲ್ಲೆಯಲ್ಲಿ ಪ್ರಮುಖರಿಗೆ ಜವಾಬ್ದಾರಿ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.