ಭಟ್ಕಳ: ಕೊರೊನಾ ಸೋಂಕಿನ ಪ್ರದೇಶ ಸೀಲ್‌ಡೌನ್

ಭಟ್ಕಳ: ಪಟ್ಟಣದಲ್ಲಿ ಈಗಾಗಲೇ ಕಂಟೈನ್‌ಮೆಂಟ್ ಹಾಗೂ ಬಫರ್ ವಲಯ ಎಂದು ಗುರುತಿಸಲಾಗಿದೆ. ಮದೀನಾ ಕಾಲೊನಿಯನ್ನು ಶುಕ್ರವಾರದಿಂದ ಸೀಲ್‌ಡೌನ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮದೀನಾ ಕಾಲೊನಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶವನ್ನು ಜಿಲ್ಲಾಧಿಕಾರಿ ಆದೇಶದಂತೆ ಸೀಲ್‌ಡೌನ್ ಮಾಡಲಾಗಿದೆ. ಎಲ್ಲ ರಸ್ತೆಗಳನ್ನು ಮುಚ್ಚಲಾಗಿದೆ. ಇಲ್ಲಿ ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅವಶ್ಯವಿದ್ದಲ್ಲಿ ಮಾತ್ರ ಜನರ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ’ ಎಂದು ಹೇಳಿದರು.
‘ತಾಲ್ಲೂಕು ಆಡಳಿತದಿಂದಲೇ ಅಗತ್ಯ ವಸ್ತುಗಳನ್ನು ಪೂರೈಸಲಾಗುತ್ತದೆ. ಪರಿಸ್ಥಿತಿ ನೋಡಿ ಇದೇ ರೀತಿಯಲ್ಲಿ ಕೆಲವು ಪ್ರದೇಶಗಳಲ್ಲಿ ಸೀಲ್‌ಡೌನ್ ಮಾಡಲು ಚಿಂತಿಸಲಾಗಿದೆ’ ಎಂದು ತಿಳಿಸಿದರು.
‘ಕಂಟೈನ್‌ಮೆಂಟ್ ಝೋನ್ ಭಟ್ಕಳದಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಯಾವುದೇ ಪರವಾನಗಿ ಇಲ್ಲದೆ ಸಂಚರಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಈಗಾಗಲೇ ಆಯಕಟ್ಟಿನ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಕೊರೊನಾ ಸೋಂಕು ತಡೆಗಟ್ಟಲು ಇನ್ನೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಸಿಕೊಳ್ಳಲಾಗುತ್ತಿದೆ. ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೆ ಸೂಚಿಸಲಾಗಿದ್ದು, ಜನ ಸಹಕಾರ ನೀಡಿದರೆ ಮಾತ್ರ ಭಟ್ಕಳವನ್ನು ಕೊರೊನಾ ಮುಕ್ತವಾಗಿ ಮಾಡಲು ಸಾಧ್ಯ’ ಎಂದರು.
ಉಪವಿಭಾಗಾಧಿಕಾರಿ ಭರತ್.ಎಸ್, ತಹಶೀಲ್ದಾರ್ ರವಿಚಂದ್ರ, ಡಿ.ವೈ.ಎಸ್.ಪಿ ಗೌತಮ್ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.