ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಜೀವವೈವಿಧ್ಯ ದಿನಾಚರಣೆ

Last Updated 21 ಮೇ 2020, 15:15 IST
ಅಕ್ಷರ ಗಾತ್ರ

ಶಿರಸಿ: ಅಂತರರಾಷ್ಟ್ರೀಯ ಜೀವವೈವಿಧ್ಯತಾ ದಿನಾಚರಣೆಯನ್ನು ಮೇ 22ರಂದು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಕರ್ನಾಟಕ ಜೀವವೈವಿಧ್ಯ ಮಂಡಳಿ ಆಶ್ರಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡುವರು. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜೀವವೈವಿಧ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು.

ಜೀವವೈವಿಧ್ಯ ಸಂರಕ್ಷಣಾ ಜಾಗೃತಿ ಅಭಿಯಾನವು ವಿವಿಧ ಸಂಘ–ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳ ಸಹಕಾರದಲ್ಲಿ ರಾಜ್ಯದಾದ್ಯಂತ ಮೇ 22ರಿಂದ ಜೂನ್ 5ರವರೆಗೆ ನಡೆಯಲಿದೆ. ವೃಕ್ಷಾರೋಪಣ, ಬೀಜದುಂಡೆ ತಯಾರಿ, ಕೆರೆ, ನದಿಮೂಲ ಸಮೀಕ್ಷೆ, ಸೂಕ್ಷ್ಮ ಜೀವವೈವಿಧ್ಯ ತಾಣಗಳ ಗುರುತಿಸುವಿಕೆ, ಔಷಧ ಸಸ್ಯವನ ನಿರ್ಮಾಣ, ವಿನಾಶದ ಅಂಚಿನ ಸೂಕ್ಷ್ಮ ಅರಣ್ಯ ಪ್ರದೇಶಗಳ ಸಮೀಕ್ಷೆ ಇತ್ಯಾದಿ ಕಾರ್ಯಚಟುವಟಿಕೆಗಳು ನಡೆಯಲಿವೆ. ಜೀವವೈವಿಧ್ಯ ಸೂಕ್ಷ್ಮ ತಾಣಗಳಿಗೆ ಭೇಟಿ, ಸಸ್ಯಗಣತಿ ವರದಿ, ಜೀವವೈವಿಧ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದವರನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ನಡೆಯಲಿದೆ ಎಂದು ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಅಶೀಸರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT