ಶನಿವಾರ, ಜೂನ್ 6, 2020
27 °C
ಜೀವವೈವಿಧ್ಯ ದಿನ ಆಚರಣೆ

ಜೀವನಕ್ರಮಕ್ಕೆ ಸನಾತನ ಪರಂಪರೆ ಮಾರ್ಗಸೂಚಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಪ್ರಕೃತಿಯೊಂದಿಗೆ ಸಮತೋಲನ ಸಾಧಿಸುವ ಜೀವನ ಕ್ರಮಕ್ಕೆ ಪ್ರಸ್ತುತ ಹೆಚ್ಚು ಮಹತ್ವ ಬಂದಿದೆ. ಇದನ್ನು ಸಾಧಿಸಲು ಸನಾತನ ಪರಂಪರೆ ಮಾರ್ಗಸೂಚಿಯಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಕೃಷಿ ವಿಶ್ವವಿದ್ಯಾಲಯ ಧಾರವಾಡ, ಅರಣ್ಯ ಕಾಲೇಜು, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಜಂಟಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಜೀವವೈವಿಧ್ಯ ದಿನದ ಅಂಗವಾಗಿ ಶುಕ್ರವಾರ ಇಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಧ್ಯಾಪಕ ಶ್ರೀಧರ ಭಟ್ಟ ಅವರು ಜನತಾ ಜೀವವೈವಿಧ್ಯ ದಾಖಲಾತಿ ಕುರಿತು ಉಪನ್ಯಾಸ ನೀಡಿದರು. ಅರಣ್ಯ ಕಾಲೇಜಿನ ವಿದ್ಯಾಧಿಕಾರಿ ಡಾ.ಐ.ಎಸ್.ಕಟಗೇರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಸದಸ್ಯೆಯರಾದ ಉಷಾ ಹೆಗಡೆ, ಪ್ರಭಾವತಿ ಗೌಡ, ತಾಲ್ಲೂಕು ಪಂಚಾಯ್ತಿ ಸದಸ್ಯರಾದ ರವಿ ಹಳದೋಟ, ವಿನಾಯಕ ಭಟ್ಟ, ಕಾರ್ಯನಿರ್ವಹಣಾಧಿಕಾರಿ ಎಫ್.ಜಿ.ಚಿನ್ನಣ್ಣನವರ್ ಇದ್ದರು.

ಸ್ಪೀಕರ್ ಕಾಗೇರಿ ಅವರು ‘ಜನತಾ ಜೀವವೈವಿಧ್ಯ ದಾಖಲಾತಿ ಮತ್ತು ಅರಣ್ಯ ಕಾಲೇಜಿನ ಸಸ್ಯಸಂಪತ್ತು’ ಎಂಬ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿದರು. ಅರಣ್ಯ ಭೂಮಿ, ಕೃಷಿ ಜಮೀನು, ಸಂರಕ್ಷಿತ ಅರಣ್ಯ ಪ್ರದೇಶ, ಅರಣ್ಯ ಸಂಪತ್ತು, ಗಿಡ-ಮರ, ಹುಳು-ಜಂತು, ಪ್ರಾಣಿ-ಪಕ್ಷಿ ಇವುಗಳ ವಿವಿಧ ಪ್ರಬೇಧ ಮತ್ತು ತಳಿಗಳ ಮಾಹಿತಿ, ಔಷಧೀಯ ಗಿಡಮೂಲಿಕೆಗಳ ವಿವರ, ಪಾರಂಪರಿಕ ತಾಣ, ಗುಡಿ-ಗುಂಡಾರಗಳ ಇತಿಹಾಸದ ಜತೆಗೆ ಪ್ರಸಕ್ತ ಅಂಕಿ-ಅಂಶಗಳನ್ನು ಈ ದಾಖಲಾತಿ ಒಳಗೊಂಡಿದೆ.

ಡಾ.ಆರ್.ವಾಸುದೇವ ಸ್ವಾಗತಿಸಿದರು. ಡಾ. ಕೆ.ಮಂಜಪ್ಪ ವಂದಿಸಿದರು. ಡಾ.ವಿನಾಯಕ ಉಪಾಧ್ಯ ನಿರೂಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು