ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಲತಾಣ ಬಳಕೆಯಲ್ಲಿ ಬಿಜೆಪಿ ಮುಂದೆ

ಕಾಂಗ್ರೆಸ್, ಜೆಡಿಎಸ್ ಮುಖಂಡರಿಂದ ‘ಪೋಸ್ಟ್’, ಟ್ವೀಟ್‌ಗಳು ಕಡಿಮೆ
Last Updated 9 ಏಪ್ರಿಲ್ 2019, 19:45 IST
ಅಕ್ಷರ ಗಾತ್ರ

ಕಾರವಾರ:ಲೋಕಸಭಾ ಚುನಾವಣೆಯ ಕಾವು ಏರುತ್ತಿರುವಂತೆಯೇ ಬಿಜೆಪಿ, ಜೆಡಿಎಸ್ ಮತ್ತುಕಾಂಗ್ರೆಸ್‌ ಮುಖಂಡರುಕ್ಷೇತ್ರದಾದ್ಯಂತ ಸಂಚರಿಸಿ ಸಭೆ, ಸಮಾವೇಶಗಳನ್ನು ಆಯೋಜಿಸುತ್ತಿದ್ದಾರೆ. ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿ ಮತ್ತಷ್ಟು ಮತದಾರರನ್ನುತಲುಪಲುಯತ್ನಿಸುತ್ತಿದ್ದಾರೆ. ಸದ್ಯ ಜಿಲ್ಲೆಯಲ್ಲಿ ಬಿಜೆಪಿ ಪಾಳಯ ಸಾಮಾಜಿಕ ಜಾಲತಾಣದ ಬಳಕೆಯಲ್ಲಿ ಮುಂದಿದೆ.ಜೆಡಿಎಸ್ ಮತ್ತು ಕಾಂಗ್ರೆಸ್ ಹಿಂದುಳಿದಿವೆ.

ಬಿಜೆಪಿ ಅಭ್ಯರ್ಥಿಅನಂತಕುಮಾರ ಹೆಗಡೆ, ಮೈತ್ರಿಅಭ್ಯರ್ಥಿ ಆನಂದ ಅಸ್ನೋಟಿಕರ್‌ಗಿಂತ ಹೆಚ್ಚು ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿದ್ದಾರೆ. ಅವರು ಟ್ವಿಟರ್, ಫೇಸ್‌ಬುಕ್, ಲಿಂಕ್ಡ್‌ ಇನ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಇದರೊಂದಿಗೆ ಸ್ವಂತ ವೆಬ್‌ಸೈಟ್, ‘ಅನಂತ್’ ಆ್ಯಂಡ್ರಾಯ್ಡ್ ಮತ್ತು ಐಒಎಸ್ ಮೊಬೈಲ್‌ ಆ್ಯಪ್‌ಗಳೂ ಇವೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲೂ ತಿಳಿಸಿದ್ದಾರೆ.

ಅನಂತಕುಮಾರ ಹೆಗಡೆ ಅವರ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಬಹುತೇಕ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಗಳೇ ತುಂಬಿವೆ. ಅದರೊಂದಿಗೆ ಉತ್ತರ ಕನ್ನಡ ಕ್ಷೇತ್ರಕ್ಕೆ ಜಾರಿಯಾದ ವಿವಿಧ ಕಾಮಗಾರಿಗಳು, ಯೋಜನೆಗಳನ್ನೂ ಪ್ರಕಟಿಸಲಾಗಿದೆ. ಆಗಾಗ ತಮ್ಮ ಎದುರಾಳಿಗಳ ಕಾಲೆಳೆಯುವ ಬರಹಗಳನ್ನೂ ಪ್ರಕಟಿಸುತ್ತಿದ್ದಾರೆ.ಅವರಿಗೆಟ್ವಿಟರ್‌ನಲ್ಲಿ 42 ಸಾವಿರಕ್ಕೂ ಅಧಿಕ ಹಾಗೂಫೇಸ್‌ಬುಕ್‌ ಪುಟದಲ್ಲಿ 98 ಸಾವಿರಅನುಯಾಯಿಗಳು (ಫಾಲೋವರ್ಸ್) ಇದ್ದಾರೆ.ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

ಆನಂದ ಅಸ್ನೋಟಿಕರ್ಫೇಸ್‌ಬುಕ್‌ನಲ್ಲಿ ತುಸು ಸಕ್ರಿಯರಾಗಿದ್ದಾರೆ.ತಮ್ಮ ಪ್ರಚಾರ ಭಾಷಣದ ವಿಡಿಯೊ ತುಣುಕುಗಳು, ಪತ್ರಿಕಾ ವರದಿಗಳನ್ನು ಅಪ್‌ಲೋಡ್‌ ಮಾಡಿದ್ದಾರೆ. ಅನಂತಕುಮಾರ ಹೆಗಡೆ ಅವರಿಗೆ ಹೋಲಿಕೆ ಮಾಡಿದರೆ ಆನಂದ್‌ಗೆ ಸಾಮಾಜಿಕ ಜಾಲತಾಣದಲ್ಲಿ ಅನುಯಾಯಿಗಳ ಸಂಖ್ಯೆ ಬಹಳ ಕಡಿಮೆಯಿದೆ. ಅವರ ಫೇಸ್‌ಬುಕ್ ಪುಟವನ್ನು5.4 ಸಾವಿರ ಜನರು ‘ಲೈಕ್’ ಮಾಡಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಟ್ವಿಟರ್‌ನಲ್ಲಿ ಖಾತೆ ಇರುವುದಾಗಿ ತಿಳಿಸಿದ್ದರು. ಆದರೆ, ಅವರ ಖಾತೆ ಸಕ್ರಿಯವಾಗಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಫೇಸ್‌ಬುಕ್‌ ಹಾಗೂ ಟ್ವಿಟರ್‌ನಲ್ಲಿ ಖಾತೆ ಹೊಂದಿದ್ದಾರೆ. ಆದರೆ,ಲೋಕಸಭಾ ಚುನಾವಣೆಯ ಬಗ್ಗೆ ಗಮನ ಸೆಳೆಯುವ ರೀತಿಯಲ್ಲಿ ‘ಪೋಸ್ಟ್‌’ಗಳಿಲ್ಲ. ಉಳಿದಂತೆ ಕಾಂಗ್ರೆಸ್‌ನ ಜಿಲ್ಲಾ ಸಮಿತಿಯ ಮುಖಂಡರು ಚುನಾವಣೆಯ ಸಂದರ್ಭದಲ್ಲಿಸಾಮಾಜಿಕ ಜಾಲತಾಣಗಳಿಂದ ಅಂತರ ಕಾಯ್ದುಕೊಂಡಿದ್ದಾರೆ.

ಮೈತ್ರಿ ಪಕ್ಷಗಳ ಸಭೆಗಳಲ್ಲಿ ಕಾಂಗ್ರೆಸ್ ಬೆಂಬಲಿಗರು ಒಗ್ಗಟ್ಟಿನ ಮಂತ್ರ ಪಠಿಸುತ್ತಿದ್ದಾರೆ. ಆದರೆ, ಜೆಡಿಎಸ್ಅಭ್ಯರ್ಥಿಯ ಪರ ಪ್ರಚಾರಕ್ಕೆ ಹೋಗುವುದೇ ಅಥವಾ ತಟಸ್ಥರಾಗಿರುವುದೇಎಂಬ ಗೊಂದಲಕ್ಕೆ ಸಿಲುಕಿದ್ದಾರೆ. ಇದೇಗೊಂದಲಸಾಮಾಜಿಕ ಜಾಲತಾಣದ ಬಳಕೆಯ ವಿಚಾರದಲ್ಲೂ ಮುಂದುವರಿದಿದೆ ಎನ್ನುತ್ತಾರೆ ಕಾಂಗ್ರೆಸ್ ಮುಖಂಡರೊಬ್ಬರು.

ಬೆಂಬಲಿಗರ ಪೈಪೋಟಿ:ಇಬ್ಬರೂ ಅಭ್ಯರ್ಥಿಗಳ ಬೆಂಬಲಿಗರೂ ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ತೆರೆದಿದ್ದಾರೆ. ಅತ್ತ ಅಭ್ಯರ್ಥಿಗಳು ಮತದಾರರ ಭೇಟಿ, ಸಮಾವೇಶಗಳಲ್ಲಿ ತಲ್ಲೀನರಾಗಿದ್ದರೆ, ಅವರ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ ಮುಖಂಡರ, ಪಕ್ಷಗಳ ಬಗ್ಗೆ ಅಭಿಪ್ರಾಯಗಳನ್ನು ಪ್ರಕಟಿಸುವುದು,ಎದುರಾಳಿ ಪಕ್ಷದ ಮೇಲೆ ಟೀಕಾಪ್ರಹಾರಗಳೂ ಜೋರಾಗಿ ನಡೆಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT