ಬಿಜೆಪಿಯಿಂದ ಮನೆಮನೆ ಪ್ರಚಾರ

ಭಾನುವಾರ, ಏಪ್ರಿಲ್ 21, 2019
26 °C

ಬಿಜೆಪಿಯಿಂದ ಮನೆಮನೆ ಪ್ರಚಾರ

Published:
Updated:
Prajavani

ಕಾರವಾರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಪರವಾಗಿ ಶಾಸಕಿ ರೂಪಾಲಿ ನಾಯ್ಕ ನೇತೃತ್ವದಲ್ಲಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಗುರುವಾರ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಯಿತು.

ನಗರದ ವಿವಿಧ ಕಡೆಗಳಲ್ಲಿ ಹಾಗೂ ಕಡವಾಡ, ಅಮದಳ್ಳಿ, ತೋಡೂರು ಕಾಲೊನಿ, ಚೆಂಡಿಯಾ ಮುಂತಾದೆಡೆ ಮನೆ ಮನೆ ಪ್ರಚಾರ ನಡೆಸಲಾಯಿತು. ಕಡವಾಡದಲ್ಲಿ ಹಮ್ಮಿಕೊಳ್ಳಲಾದ ಬೂತ್ ಕಮಿಟಿಯ ಸಭೆಯಲ್ಲಿ ಮಾತನಾಡಿದ ರೂಪಾಲಿ ನಾಯ್ಕ, ‘ ಪಕ್ಷದ ಅಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಯಾವುದೇ ಸಂಸದರ ಅಥವಾ ಶಾಸಕರ ಬಗ್ಗೆ ಮಾತನಾಡುವುದಿಲ್ಲ. ಅವರು ಬೂತ್ ಕಮಿಟಿ ಗಟ್ಟಿಯಾದರೆ ಪಕ್ಷ‌ ಶಕ್ತಿಯುತವಾಗಿರುತ್ತದೆ ಎಂದು ಹೇಳುತ್ತಿರುತ್ತಾರೆ. ಸ್ಪರ್ಧೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸಬೇಕು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !