ಗುರುವಾರ , ಮೇ 26, 2022
29 °C

ಗೋಕರ್ಣಕ್ಕೆ ಈಶ್ವರಪ್ಪ ಭೇಟಿ: ಆತ್ಮಲಿಂಗಕ್ಕೆ ಪೂಜೆ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕರ್ಣ: ಗ್ರಾಮೀಣಾಭಿವೃದ್ಧಿ ಖಾತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗೋಕರ್ಣಕ್ಕೆ ಮಂಗಳವಾರ ಭೇಟಿ ನೀಡಿ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಲು ನಿರಾಕರಿಸಿದ ಅವರು, 'ನಾನು ಖಾಸಗಿ ಕಾರ್ಯಕ್ರಮದ ನಿಮಿತ್ತ ಇಲ್ಲಿಗೆ ಬಂದಿದ್ದೇನೆ. ದೇವರಿಗೆ ಪೂಜೆ ಸಲ್ಲಿಸಿ ಮನಸ್ಸಿನ ನಿರಾಳತೆ ಬಯಸಿದ್ದೇನೆ. ಯಾವುದೇ ರಾಜಕೀಯ ಮಾತನಾಡುವುದಿಲ್ಲ' ಎಂದರು.

ಇದನ್ನೂ ಓದಿ: 

ಇದಕ್ಕೂ ಮೊದಲು ಅಂಗಾರಕ ಸಂಕಷ್ಟಿಯ ನಿಮಿತ್ತ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಹಾಬಲೇಶ್ವರ ದೇವಸ್ಥಾನದ ಮೇಲುಸ್ತುವಾರಿ ಸಮಿತಿಯ ಸದಸ್ಯರು ಎಲ್ಲ ಪೂಜಾ ಕಾರ್ಯ ನೆರವೇರಿಸಿಕೊಟ್ಟರು.

ಕುಮಟಾ ಶಾಸಕ ದಿನಕರ ಶೆಟ್ಟಿ, ಬಿ.ಜೆ.ಪಿ.ಪ್ರಮುಖರಾದ ಪ್ರಮೋದ ಹೆಗಡೆ, ಗೋಕರ್ಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಜನ್ನು, ತೊರ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಆನಂದು ಕವರಿ ಮುಂತಾದವರು ಇದ್ದರು.

ಕೋಟಿತೀರ್ಥಕ್ಕೆ ಭೇಟಿ ನೀಡದ ಈಶ್ವರಪ್ಪ
ಸಚಿವರಾಗಿದ್ದಾಗ ತಾವೇ ಹೆಚ್ಚಿನ ಮುತುವರ್ಜಿ ವಹಿಸಿ ಅನುದಾನ‌ ಬಿಡುಗಡೆ ಮಾಡಿದ್ದ ಕೋಟಿತೀರ್ಥದ ಸ್ವಚ್ಛತಾ ಕಾಮಗಾರಿಯನ್ನು ವೀಕ್ಷಿಸಲು ಆಸಕ್ತಿ ತೋರದೇ ಹಾಗೆಯೇ ತೆರಳಿದರು. 15 ದಿನಗಳ ಹಿಂದೆ ಗೋಕರ್ಣಕ್ಕೆ ಬಂದಿದ್ದಾಗ, ಕೋಟಿತೀರ್ಥದ ಕಾಮಗಾರಿ ವೀಕ್ಷಿಸಿ ಮತ್ತೆ ನೋಡಲು ಬರುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ಪ್ರಚೋದನಕಾರಿ ಪೋಸ್ಟ್‌: ಹಳೇ ಹುಬ್ಬಳ್ಳಿ ಉದ್ವಿಗ್ನ, ಪೊಲೀಸರ ಮೇಲೆ ಕಲ್ಲು ತೂರಾಟ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು